ಚಿತ್ರದುರ್ಗ: ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಕಾರು ಹರಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ತಾಲೂಕಿನ ಟಿ. ನುಲೇನೂರು ಗೇಟ್ ಬಳಿ ನಡೆದಿದೆ.
ಬೊರೇನಹಳ್ಳಿ ಗ್ರಾಮದ ರಾಮಪ್ಪ ( 51) ಮೃತ ವ್ಯಕ್ತಿ. ರಾತ್ರಿ ವೇಳೆ ಮನೆಗೆ ಹೋಗಲೆಂದು ರಸ್ತೆ ದಾಟುತ್ತಿರುವಾಗ ವೇಗವಾಗಿ ಬಂದ ಕಾರೊಂದು ರಾಮಪ್ಪನವರಿಗೆ ಗುದ್ದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನು ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ರಸ್ತೆ ಸುರಕ್ಷತೆ ಕುರಿತು ಸೂಕ್ತ ಕ್ರಮ ಕೈಗೊಳ್ಳದಿರುವುದರಿಂದ ದುರಂತ ಸಂಭವಿಸಿದೆ ಎಂದು ಬೋರೆನಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.