ಚಿತ್ರದುರ್ಗ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿ ಎರಡನೇ ವರ್ಷದ ಅವಧಿಗೆ ಕಾಲಿಟ್ಟಿದೆ. ಯಾವುದೇ ಭ್ರಷ್ಟಾಚಾರ ಇಲ್ಲದೆ, ಕೊರೊನಾ ನಿಭಾಯಿಸುವುದರಲ್ಲಿ ಕೇಂದ್ರ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾ ಬಿಜೆಪಿ ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮೋದಿಯವರ ಅಭಿವೃದ್ಧಿ ಕೆಲಸಗಳ ಬಗ್ಗೆ ಗುಣಗಾನ ಮಾಡಲಾಯಿತು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಮುರಳಿಯವರು ನಗರಸಭೆ ಸ್ವಚ್ಛತಾ ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸಿದರು.