ಚಿತ್ರದುರ್ಗ: ಕೊರೊನಾ ಸೋಂಕು ಎಲ್ಲೆಡೆ ಹರಡುತ್ತಿರುವುದರಿಂದ ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರವನ್ನು ಪ್ರತಿ ಜಿಲ್ಲೆಯಲ್ಲಿ ತೆರೆಯಬೇಕು ಎಂದು ಜಿಲ್ಲಾ ಉಪನ್ಯಾಸಕರ ಹಾಗೂ ಪ್ರಾಚಾರ್ಯರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ದು, ಮೌಲ್ಯಮಾಪನ ಕೇಂದ್ರ ತೆರೆದು ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಈಗಾಗಲೇ ಬೆಂಗಳೂರು, ದಾವಣಗೆರೆ, ಬೆಳಗಾವಿ, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಮೌಲ್ಯ ಮಾಪನ ಕೇಂದ್ರಗಳನ್ನು ತೆರೆದಿದೆ. ಈ ಜಿಲ್ಲೆಗಳಿಗೆ ತೆರಳುವುದರಿಂದ ಸಮಸ್ಯೆಗಳನ್ನು ಎದುರಿಸುವುದರೊಂದಿಗೆ ಕೊರೊನಾ ಸೋಂಕಿನ ಭೀತಿ ಕಾಡುತ್ತಿದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಜಿಲ್ಲಾಧಿಕಾರಿಗಳ ಬದಲಿಗೆ ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಎಸ್.ಎ. ಸಂಗಪ್ಪನವರು ಮನವಿಯನ್ನು ಸಂಬಂಧಪಟ್ಟ ಸಚಿವರಿಗೆ ತಲುಪಿಸುವುದಾಗಿ ತಿಳಿಸಿದರು.