ಚಿತ್ರದುರ್ಗ: ತುರವನೂರು ಗ್ರಾಮದಲ್ಲಿರುವ ಡಿಗ್ರಿ ಕಾಲೇಜನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಸ್ಥಳಾಂತರ ಮಾಡಿರುವುದನ್ನು ಖಂಡಿಸಿ ಚಿತ್ರದುರ್ಗದಲ್ಲಿ ನಡೆಯುತ್ತಿರುವ ಶಾಸಕರ ನೇತೃತ್ವದ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.
ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ ರಘುಮೂರ್ತಿ ನೇತೃತ್ವದಲ್ಲಿ ಚಿತ್ರದುರ್ಗ ನಗರದ ಡಿಸಿ ವೃತ್ತದಲ್ಲಿ ಕನ್ನಡ ಪರ ಸಂಘಟನೆ, ಕಿಸಾನ್ ಸಂಘ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಲ ವಿದ್ಯಾರ್ಥಿಗಳು ಸರ್ಕಾರ ತನ್ನ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ.
ಇನ್ನು ಪ್ರತಿಭಟನಾಕಾರರು ಚಿತ್ರದುರ್ಗ ತಾಲೂಕಿನ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಸ್ಥಳಾಂತರದ ಆದೇಶ ಹಿಂಪಡೆಯುವಂತೆ ಕೋರಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.