ಚಿತ್ರದುರ್ಗ: ಕಾರ್ಮಿಕ ಸಂಘಟನೆಗಳಿಂದ ಭಾರತ ಬಂದ್ಗೆ ಕರೆ ನೀಡಿರುವ ಹಿನ್ನೆಲೆ ಕಾರ್ಮಿಕ ಸಂಘಟನೆಗಳು ನಗರದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿವೆ.
ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಬಂದ್ಗೆ ಸಹಕರಿಸುವಂತೆ ನಿಂತಿದ್ದ ಬಸ್ಗಳನ್ನು ತೆರಳುವಂತೆ ಹಾಗೂ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವಂತೆ ಮನವಿ ಮಾಡಿಕೊಂಡಿದ್ದಾರೆ.
ಗಾಂಧಿ ಸರ್ಕಲ್ನಲ್ಲಿ ನಿಂತಿದ್ದ ವಾಹನಗಳಿಗೆ ಬೆಂಬಲ ಕೋರಿ ಮನವಿ ಮಾಡಿದ ಬಳಿಕ ಪೊಲೀಸ್ ಠಾಣೆ ಎದುರು ಪ್ರತಿಭಟನೆಗೆ ಯತ್ನಿಸಿದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಪ್ರತಿಭಟನಾನಿರತ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿ ಗ್ರಾಮಾಂತರ ಠಾಣೆಗೆ ಕರೆತಂದಿದ್ದು ಆಕ್ರೋಶಕ್ಕೆ ಕಾರಣವಾಯಿತು.