ಚಿತ್ರದುರ್ಗ: ಚಿತ್ರದುರ್ಗ ಮುರುಘಾಮಠದ ಶ್ರೀ ವಿರುದ್ಧದ ಪೋಕ್ಸೋ ಕೇಸ್‌ನಲ್ಲಿ ಎ2 ಆರೋಪಿಯಾಗಿದ್ದ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿಗೆ ಕೋರ್ಟ್ನಿಂದ ಜಾಮೀನು ಮಂಜೂರಾಗಿದ್ದು, ಅವರನ್ನು ನಿನ್ನೆ (ಗುರುವಾರ) ಜೈಲಿನಿಂದ ಬಿಡುಗಡೆ ಮಾಡಲಾಯಿತು.
ಚಿತ್ರದುರ್ಗದ ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಎ1 ಆರೋಪಿ ಮುರುಘಾ ಶ್ರೀಗೆ ಜಾಮೀನು ಮಂಜೂರು ಮಾಡಲಾಗಿದೆ. ಸ್ವಾಮೀಜಿ ಜೈಲಿನಿಂದ ಬಿಡುಗಡೆಯಾಗಿ ಇನ್ನೂ ಒಂದು ತಿಂಗಳು ಕಳೆದಿಲ್ಲ. ಇದರ ಬೆನ್ನಲ್ಲಿಯೇ ಎ2 ಆರೋಪಿ ಮಹಿಳಾ ವಾರ್ಡನ್ ರಶ್ಮಿ ಜಾಮೀನು ಮಂಜೂರಾತಿಗೆ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಡಿ.21ರಂದು ಮಹಿಳಾ ವಾರ್ಡನ್ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಿದ್ದ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿತ್ತು.
ಮೊದಲನೇ ಪ್ರಕರಣದಲ್ಲಿ ಇತ್ತೀಚೆಗೆ ಮುರುಘಾ ಮಠದ ಸ್ವಾಮೀಜಿ ಜೈಲಿನಿಂದ ಬಿಡುಗಡೆಯಾಗಿದ್ದರು. ಎರಡನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಚಿತ್ರದುರ್ಗ ಕೋರ್ಟ್ ವಿಚಾರಣೆ ನಡೆಸಿ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಬಳಿಕ, ಬಂಧನಕ್ಕೆ ತಡೆಯಾಜ್ಞೆ ಕೋರಿ ಸ್ವಾಮೀಜಿ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ನ್ಯಾಯಾಂಗ ಬಂಧನಕ್ಕೆ ತಡೆಯಾಜ್ಞೆ ನೀಡಿದ್ದರಿಂದ ಸ್ವಾಮೀಜಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು.
ಇದನ್ನೂ ಓದಿ: ಡಂಪರ್-ಬಸ್ ಮಧ್ಯೆ ಡಿಕ್ಕಿ, ಧಗಧಗನೇ ಉರಿದ ವಾಹನಗಳು, 12 ಜನ ಸಜೀವದಹನ