ಚಿತ್ರದುರ್ಗ: ಗಾಂಜಾ ಅಡ್ಡೆ ಮೇಲೆ ದಾಳಿ ನಡೆಸಿ 1.8 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪೂರ ಗ್ರಾಮದಲ್ಲಿ ನಡೆದಿದೆ.
ಪ್ರಕಾಶ್ ಬಂಧಿತ ಆರೋಪಿ. ಅಬಕಾರಿ ಅಧೀಕ್ಷಕ ಹಾಗೂ ರಾಜ್ಯ ವಿಚಕ್ಷಣದಳ ಮುಖ್ಯಸ್ಥ ಮೋತಿಲಾಲ್ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ವೇಳೆ 1.8 ಕೆಜಿ ಒಣ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಗಾಂಜಾ ಮಾರುತ್ತಿದ್ದ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದ್ದು, ರಾಜ್ಯ ವಿಚಕ್ಷಣ ದಳದಿಂದ ಪ್ರಕರಣ ದಾಖಲಾಗಿದೆ.