ಚಿತ್ರದುರ್ಗ : ಮಹಿಳೆಯರ ದೂರವಾಣಿ ಸಂಖ್ಯೆಗಳನ್ನು ಸಂಗ್ರಹಿಸಿ ಅದಕ್ಕೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೌಸಿಂಗ್ ಬೋರ್ಡ್ ಕಾಲೋನಿಯ ನಿವಾಸಿ ರಾಮಕೃಷ್ಣ(55) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ಹುಬ್ಬಳ್ಳಿ, ಬೆಂಗಳೂರು, ಮಂಗಳೂರು ಮೂಲದ ಮಹಿಳೆಯರ ನಂಬರ್ಗಳನ್ನು ಸಂಗ್ರಹಿಸಿ ಈತ ವಿಡಿಯೋ ಕಾಲ್ ಹಾಗೂ ದೂರವಾಣಿ ಕರೆ ಮಾಡುತ್ತಿದ್ದನಂತೆ. ದೂರವಾಣಿ ಕರೆ ಸ್ವೀಕರಿಸದ ಮಹಿಳೆಯರಿಗೆ ಈತ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ.
ಪೊಲೀಸರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಈತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತ ಆರೋಪಿಯಿಂದ ಅಶ್ಲೀಲ ಚಿತ್ರ, ಸಂದೇಶಗಳಿರುವ ಮೊಬೈಲ್‌ನ ಚಳ್ಳಕೆರೆ ಠಾಣೆಯ ಪೊಲೀಸರು ವಶಕ್ಕೆ ಪಡೆದು, ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.