ಚಿತ್ರದುರ್ಗ: ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಈಗಾಗಲೇ ಜಿಲ್ಲೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಕರ್ಫ್ಯೂ ಇದ್ರೂ ಕೂಡ ಜನ ಬೀದಿಗಿಳಿಯುವುದನ್ನು ಮಾತ್ರ ಬಿಟ್ಟಿಲ್ಲ. ಹೀಗಾಗಿ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 202 ಜನರನ್ನು ಪೊಲೀಸರು ದಸ್ತಗಿರಿ ಮಾಡಿದ್ದು ಬೈಕ್, ಆಟೋ ಸೇರಿ 135 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಿವಿಧ ಠಾಣೆಗಳಲ್ಲಿ ಕೇಸ್ ದಾಖಲಿಸಿದ್ದರಿಂದ ಜನ ಮನೆಯಿಂದ ಠಾಣೆಗೆ ಅಲೆಯುವ ಪರಿಸ್ಥಿತಿ ಉದ್ಭವಿಸಿದೆ. ಇನ್ನು ಮುಂದೆ ಲಾಕ್ ಡೌನ್ ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಲಾಗುತ್ತೆ ಅಂತ ಪೊಲೀಸ್ ಇಲಾಖೆ ಎಚ್ಚರಿಸಿದೆ.