ಚಿತ್ರದುರ್ಗ: ಡಾಂಬರೀಕರಣ ಕಾಮಗಾರಿ ಮುಗಿದ ಕೇವಲ ಮೂರೇ ತಿಂಗಳಿಗೆ ರಸ್ತೆ ಸಂಪೂರ್ಣ ಕಿತ್ತು ಹೋಗಿದ್ದು ದೊಡ್ಡದೊಡ್ಡ ಗುಂಡಿಗಳು ಸೃಷ್ಟಿಯಾಗಿವೆ. ಹಿರಿಯೂರು ತಾಲೂಕಿನ ಮೆಟಿಕುರ್ಕೆ ಗ್ರಾಮದ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಕಣ್ಣಿಗೆ ರಾಚುತ್ತದೆ.
ಭದ್ರ ಮೆಲ್ದಂಡೆ ಯೋಜನೆಯಡಿ ನಿರ್ಮಿತಿ ಕೇಂದ್ರದ ವತಿಯಿಂದ 50 ಲಕ್ಷ ರೂಪಾಯಿ ಖರ್ಚು ಮಾಡಿ 1.4 ಕಿ.ಮಿ ರಸ್ತೆ ನಿರ್ಮಿಸಲಾಗಿತ್ತು. ಆದರೆ ರಾಷ್ಟ್ರೀಯ ಹೆದ್ದಾರಿಯಿಂದ ಮೆಟಿಕುರ್ಕೆ, ಯರದಕಟ್ಟೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಕಳಪೆ ಕಾಮಗಾರಿ ರೈತರು ಹಾಗೂ ಸಾರ್ವಜನಿಕರಿಂದ ಆಕ್ರೋಶಕ್ಕೆ ಕಾರಣವಾಗಿದೆ.
ಕಳಪೆ ಕಾಮಗಾರಿಯಿಂದ ಕೂಡಿದ ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರು, ಜನಸಾಮಾನ್ಯರು ಹೊಲಗದ್ದೆಗೆ ಓಡಾಡಲು ಪಾರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳಪೆ ಕಾಮಗಾರಿ ಮಾಡಿರುವದ ಗುತ್ತಿದಾರರ ಲೆಸನ್ಸ್ ರದ್ದು ಮಾಡಿ ಕಪ್ಪು ಪಟ್ಟಿಗೆ ಸೇರಿಸಬೇಕು. ಇಲ್ಲವೇ ಮತ್ತೆ ರಸ್ತೆ ರಿಪೇರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸ್ಥಳೀಯರು ಒತ್ತಾಯಿಸಿದ್ದಾರೆ.