ಚಿತ್ರದುರ್ಗ: ಬಯಲುಸೀಮೆಯ ಪ್ರಸಿದ್ಧ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಮಾರ್ಚ್ 12ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ದೇವಸ್ಥಾನದ ಒಳಮಠದಲ್ಲಿ ಜಾತ್ರೆ ನಡೆಯಲಿದೆ. ಈ ಹಿನ್ನೆಲೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ವ್ಯವಸ್ಥೆ ಸಮರ್ಪಕವಾಗಿರುವಂತೆ ಸಮುದಾಯಭವನದಲ್ಲಿ ಏರ್ಪಡಿಸಲಾಗಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಾರ್ಚ್ 5ರಿಂದ 16ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದ್ದು, ದೊಡ್ಡ ರಥೋತ್ಸವವು ಮಾರ್ಚ್ 12ರಂದು ನಡೆಯಲಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಕೂಡಾ ಜಾತ್ರೆ ಯಶಸ್ವಿಯಾಗಿ ನೆರವೇರಲು ಅಗತ್ಯವಾದ ಎಲ್ಲಾ ಸಿದ್ಧತೆ ಕೈಗೊಳ್ಳಬೇಕು. ಜಾತ್ರೆಗೆ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯ ಆಡಚಣೆ ಉಂಟಾಗದಂತೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.