ETV Bharat / state

ಮೋದಿ ಆಗಮನಕ್ಕೆ ಮದುವಣಗಿತ್ತಿಯಂತೆ ಶೃಂಗಾರಗೊಂಡ ಕೋಟೆನಾಡು

ಕೋಟೆನಾಡು ಚಿತ್ರದುರ್ಗಕ್ಕೆ ಪ್ರಧಾನಿ ಮೋದಿ ನಾಳೆ ಆಗಮಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಆಗಮಿಸುವ ಅವರು ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಎ. ನಾರಾಯಣಸ್ವಾಮಿ, ದಾವಣಗೆರೆ ಅಭ್ಯರ್ಥಿ ಜಿ.ಎಂ. ಸಿದ್ದೇಶ್ವರ ಹಾಗೂ ತುಮಕೂರು ಅಭ್ಯರ್ಥಿ ಬಸವರಾಜು ಪರ ಮತಯಾಚಿಸಲಿದ್ದಾರೆ.

author img

By

Published : Apr 8, 2019, 10:52 PM IST

ಕೋಟೆನಾಡು

ಚಿತ್ರದುರ್ಗ: ಕೈ ಭದ್ರಕೋಟೆಯಲ್ಲಿ ಕಮಲ ಅರಳಿಸಲು ವೇದಿಕೆ ಸಿದ್ಧವಾಗಿದೆ. ನಾಳೆ ಪ್ರಧಾನಿ ಮೋದಿ ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಕಾಂಗ್ರೆಸ್ ಕೋಟೆಯಲ್ಲಿ ಚುನಾವಣಾ ರಣಕಹಳೆ ಮೊಳಗಿಸಲು ಕ್ಷಣಗಣನೆ ಆರಂಭವಾಗಿದೆ.

ಕೋಟೆನಾಡು ಚಿತ್ರದುರ್ಗಕ್ಕೆ ಪ್ರಧಾನಿ ಮೋದಿ ನಾಳೆ ಆಗಮಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಆಗಮಿಸುವ ಮೋದಿ ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಎ. ನಾರಾಯಣಸ್ವಾಮಿ, ದಾವಣಗೆರೆ ಅಭ್ಯರ್ಥಿ ಜಿ.ಎಂ. ಸಿದ್ದೇಶ್ವರ ಹಾಗೂ ತುಮಕೂರು ಅಭ್ಯರ್ಥಿ ಬಸವರಾಜು ಪರ ಮತಯಾಚಿಸಲಿದ್ದಾರೆ. ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಂದ ಆಗಮಿಸುವ ಕಾರ್ಯಕರ್ತರಿಗೆ ಅಭಿಮಾನಿಗಳಿಗೆ ಕೂರಲು 50,000 ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಮಧ್ಯಾಹ್ನ 2 ಗಂಟೆಗೆ ಸರಿಯಾಗಿ ವೇದಿಕೆಗೆ ಆಗಮಿಸಲಿರುವ ಮೋದಿ ಸುಮಾರು ಒಂದು ತಾಸು ಮಾತನಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಇದಕ್ಕಾಗಿ ಸುಮಾರು1,800 ಪೊಲೀಸರ ಭದ್ರತೆ ಒದಗಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್ ತಿಳಿಸಿದ್ದಾರೆ.

ಮೋದಿ ಆಗಮನಕ್ಕೆ ಮದುವಣಗಿತ್ತಿಯಂತೆ ಶೃಂಗಾರಗೊಂಡ ಕೋಟೆನಾಡು

2018ರ ಮೇ 6 ರಂದು ಚಿತ್ರದುರ್ಗಕ್ಕೆ ವಿಧಾನಸಭಾ ಚುನಾವಣೆಗೆ ಮತಯಾಚನೆ ಮಾಡಲು ಬಂದಿದ್ದ ಮೋದಿ ಈಗ ಒಂದು ವರ್ಷ ತುಂಬುವುದರೊಳಗೆ ಮತ್ತೊಮ್ಮೆ ಅದೇ ಮೈದಾನಕ್ಕೆ ಮತಯಾಚನೆಗೆ ಬರುತ್ತಿದ್ದಾರೆ. ಕಳೆದ ಸಲ ಮೋದಿ ಅಲೆಯಿಂದಾಗಿ ಜಿಲ್ಲೆಯ ಜನತೆ ಐತಿಹಾಸಿಕ ತೀರ್ಪು ನೀಡಿ 5 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದರು. ಈಗ ಲೋಕಸಭಾ ಚುನಾವಣೆಗೆ ಆಗಮಿಸುತ್ತಿರುವ ಮೋದಿ ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಕಮಲ ಅರಳಿಸುವ ವಿಶ್ವಾಸ ಬಿಜೆಪಿಗಿದೆ.

ನಗರದಲ್ಲಿ ನಾಳೆ ನಡೆಯುವ ಮೋದಿಯವರ ಬಹಿರಂಗ ಸಮಾವೇಶದ ಸಿದ್ಧತೆಯನ್ನು ಮಾಜಿ ಸಚಿವ ಗೋವಿಂದ ಕಾರಾಜೋಳ ವೀಕ್ಷಣೆ ಮಾಡಿದರು. ನಗರದಲ್ಲಿರುವ ವಿಜ್ಞಾನ ಕಾಲೇಜು ಆವರಣಕ್ಕೆ ಭೇಟಿ ನೀಡಿದ ಅವರು ಬೃಹತ್ ವೇದಿಕೆಯನ್ನು ಗಮನಿಸಿ ಕಾರ್ಯಕರ್ತರಿಂದ‌ ಸಮಾವೇಶದ ಬಗ್ಗೆ ಮಾಹಿತಿ ಪಡೆದರು.

sample description
ETV Bharat Logo

Copyright © 2024 Ushodaya Enterprises Pvt. Ltd., All Rights Reserved.