ಚಿತ್ರದುರ್ಗ : ತೈಲ ಬೆರೆ ಏರಿಕೆ ಖಂಡಿಸಿ ಎಐಟಿಯುಸಿ, ಸಿಐಟಿಯು, ಕಮ್ಯುನಿಸ್ಟ್ ಸಂಘಟನೆಗಳ ಕಾರ್ಯಕರ್ತರು ಚಿತ್ರದುರ್ಗ ನಗರದ ಡಿಸಿ ವೃತ್ತದಲ್ಲಿ ಪ್ರತಿಭಟಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಅಪರ ಜಿಲ್ಲಾಧಿಕಾರಿ ಸಂಗಪ್ಪ ಅವರಿಗೆ ಮನವಿ ಸಲ್ಲಿಸಿದರು.
ಪೆಟ್ರೋಲ್, ಡೀಸೆಲ್ ಬೆಲೆ ದಿನೇದಿನೆ ಹೆಚ್ಚಳ ಮಾಡುತ್ತಿರುವ ಕಾರಣ, ಸಾಮಾನ್ಯ ಜನರಿಗೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಕಚ್ಚಾ ತೈಲ ದರ ಇಳಿಕೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಷ್ಟ್ರಾದ್ಯಂತ ಹೋರಾಟ ಮಾಡುತ್ತೇವೆ ಎಂದು ಕೇಂದ್ರಕ್ಕೆ ಎಚ್ಚರಿಸಿದರು.