ಚಿತ್ರದುರ್ಗ: ಸಣ್ಣ ಹಾಗೂ ಅತಿ ಸಣ್ಣ ರೈತರನ್ನು ಸಂಕಷ್ಟಕ್ಕೆ ದೂಡುವ ಭೂ ಸುಧಾರಣಾ ಕಾಯ್ದೆಯನ್ನು ಸಂಸತ್ ನಲ್ಲಿ ಮಂಡಿಸಿರುವುದನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಭಾರತೀಯ ಕಮ್ಯುನಿಸ್ಟ್ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಿಂದ ಡಿಸಿ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಆಕ್ರೋಶ ವ್ಯಕ್ತಪಡಿಸಿ, ಕೇಂದ್ರ ಹಾಗು ರಾಜ್ಯ ಸರ್ಕಾರಗಳ ವಿರುದ್ಧ ಅಸಮಾಧಾನ ಹೊರಹಾಕಿದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆ ರೈತ ವಿರೋಧಿಯಾಗಿದ್ದು, ಕೂಡಲೇ ಇದನ್ನು ಹಿಂಪಡೆಯಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. ಬಳಿಕ ಅಪರ ಜಿಲ್ಲಾಧಿಕಾರಿ ಸಂಗಪ್ಪನವರ ಮುಖೇನ ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಿದರು.