ಚಿತ್ರದುರ್ಗ: ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಯುವಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚಿತ್ರದುರ್ಗ ನಗರದ ಡಿಸಿ ವೃತ್ತದಲ್ಲಿ ಸೇರಿದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಉತ್ತರ ಪ್ರದೇಶದಲ್ಲಿ ನಡೆದ ಎರಡು ಅತ್ಯಾಚಾರ ಪ್ರಕರಣಗಳ ಬಗ್ಗೆ ಪ್ರಧಾನಿ ಮೋದಿ ಹಾಗೂ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತುಟಿ ಬಿಚ್ಚಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚಿತ್ರದುರ್ಗ ನಗರದ ಡಿಸಿ ವೃತ್ತದಲ್ಲಿ ಗಾಂಧಿ ಜಯಂತಿ ಆಚರಿಸುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದ್ದು, ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಲಾಯಿತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ತಾಜ್ ಪೀರ್, ವಿಧಾನ ಪರಿಷತ್ ಸದಸ್ಯೆ ಜಯಮ್ಮ ಬಾಲ್ ರಾಜ್ ಭಾಗಿಯಾಗಿದ್ದರು.