ಚಿತ್ರದುರ್ಗ : ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಿ ಒಳಮೀಸಲಾತಿಗೆ ಅನುವು ಮಾಡಿಕೊಡುವಂತೆ ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು ನಗರದಲ್ಲಿ ಅಹೋರಾತ್ರಿ ಧರಣಿಯನ್ನು ಆರಂಭಿಸಿದ್ದಾರೆ.
ನಗರದ ಡಿಸಿ ವೃತ್ತದಲ್ಲಿ ಹಮ್ಮಿಕೊಂಡಿರುವ ಈ ಧರಣಿಯನ್ನು ಅಂಬೇಡ್ಕರ್ ಅವರ ಫೋಟೋಗೆ ಪುಷ್ಪಾರ್ಚನೆ ಮಾಡುವ ಮುಖೇನ ಆರಂಭಿಸಲಾಯಿತು. ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಈ ಅಹೋರಾತ್ರಿ ಧರಣಿ ಕೈಗೊಳ್ಳಲಾಗಿದ್ದು, ತಕ್ಷಣ ಸದಾಶಿವ ಆಯೋಗದ ವರದಿಯನ್ನು ಮಂಡಿಸಿ ಒಳ ಮೀಸಲಾತಿಗೆ ಅನುವು ಮಾಡಿಕೊಡಬೇಕೆಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ವರದಿ ಮಂಡಿಸಲು ತಡ ಮಾಡುತ್ತಿರುವ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಸುಪ್ರೀಂಕೋರ್ಟ್ ಒಳ ಮೀಸಲಾತಿ ಬಗ್ಗೆ ನಿರ್ದೇಶನ ನೀಡಿ ಅಭಿಪ್ರಾಯ ವ್ಯಕ್ತಪಡಿಸಿದರು ಕೂಡ ರಾಜ್ಯ ಸರ್ಕಾರ ವರದಿ ಮಂಡಿಸಲು ತಡಮಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.