ಚಿತ್ರದುರ್ಗ: ಸಚಿವ ಬಿ.ಶ್ರೀರಾಮುಲುಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ನಾಯಕ ಸಮುದಾಯದಿಂದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಹಿರೇಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಟಯರ್ಗೆ ಬೆಂಕಿ ಹಚ್ಚಿದ ಬಿಜೆಪಿ ಕಾರ್ಯಕರ್ತರು ಹಾಗೂ ರಾಮುಲು ಅಭಿಮಾನಿಗಳು ಸರ್ಕಾರ ಡಿಸಿಎಂ ಸ್ಥಾನ ನೀಡದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಹಿರೇಹಳ್ಳಿ ಗ್ರಾಮದ ಬಳಿಯ ಬೀದರ್- ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದು, ಶ್ರೀರಾಮುಲುಗೆ ಡಿಸಿಎಂ ಪಟ್ಟ ನೀಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು. ಇನ್ನು ಪ್ರತಿಭಟನೆಯಿಂದ ಇಡೀ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಕೆಲಕಾಲ ಸ್ಥಗಿತವಾಗಿತ್ತು.