ಧಾರವಾಡ/ ಚಿತ್ರದುರ್ಗ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿಗ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಫೇಲ್ ವಿಷಯದಲ್ಲಿ ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ದೂರಿದರು. ದೇಶದ ಜವಾಬ್ದಾರಿಯುತ ನಾಗರಿಕನಾಗಿ, ಕಾಂಗ್ರೆಸ್‌ನ ರಾಷ್ಟೀಯ ಮಾಜಿ ಅಧ್ಯಕ್ಷರಾಗಿ ದೇಶದ ರಕ್ಷಣೆ ಕುರಿತು ಜನರಲ್ಲಿ ಸುಳ್ಳು ಹೇಳುವ ಮೂಲಕ ದೇಶ ದ್ರೋಹಿ ಕೆಲಸ ಮಾಡಿದ್ದಾರೆ. ದೇಶದ ಜನರಲ್ಲಿ ರಾಹುಲ್ ಗಾಂಧಿ ಕೂಡಲೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.
ಅದೇ ರೀತಿ, ಚಿತ್ರದುರ್ಗದಲ್ಲೂ ಸಹ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳುವ ಮೂಲಕ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದರು. ನಗರದ ಡಿಸಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಸಂಸದ ರಾಹುಲ್ ಗಾಂಧಿ ವಿರುದ್ಧ ಘೋಷಣೆ ಹಾಕುವ ಮೂಲಕ ಪ್ರಧಾನಿಯವರ ವಿರುದ್ಧ ದೇಶದ ಜನತೆಗೆ ನೀಡಿದ ಸುಳ್ಳು ಮಾಹಿತಿಯನ್ನು ಖಂಡಿಸಿ ತಕ್ಷಣ ಕ್ಷಮೆ ಯಾಚಿಸುವಂತೆ ಒತ್ತಾಯಿಸಿದರು. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಗೆ ತಲೆ ಇಲ್ಲ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.