ಚಿತ್ರದುರ್ಗ: ನರೇಂದ್ರ ಮೋದಿ ಬಂದು ಹೋದ ಬೆನ್ನಲ್ಲೇ ಕೋಟೆನಾಡಿಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ.
ಕೋಲಾರದಿಂದ ಮಧ್ಯಾಹ್ನ 3.20 ಕ್ಕೆ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗಕ್ಕೆ ರಾಹುಲ್ ಗಾಂಧಿ ಬರಲಿದ್ದು, ಮೈತ್ರಿ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪರ ಮತಯಾಚಿಸಲಿದ್ದಾರೆ. ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿ ಜಂಟಿಯಾಗಿ ನಗರದ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿ ಬೃಹತ್ ಬಹಿರಂಗ ಸಮಾವೇಶ ಆಯೋಜನೆ ಮಾಡಲಾಗಿದೆ. ಸುಮಾರು 1.5 ಲಕ್ಷ ಜನರು ಸೇರುವ ನಿರೀಕ್ಷೆಯಿದೆ.
ನಗರದ ಒನಕೆ ಓಬವ್ವ ಕ್ರೀಡಾಂಗಣದ ಹೆಲಿಪ್ಯಾಡ್ಗೆ ಆಗಮಿಸಿಲಿರುವ ರಾಹುಲ್ ಗಾಂಧಿಗೆ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ್, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸಾಥ್ ನೀಡಲಿದ್ದಾರೆ.
ಈ ಸಮಾವೇಶಕ್ಕೆ ಆಗಮಿಸುವವರಿಗೆ 25 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಚಿತ್ರದುರ್ಗದಲ್ಲಿ ಸಮಾವೇಶ ಮುಗಿದ ಬಳಿಕ ರಾಹುಲ್ ಗಾಂಧಿ ಸಂಜೆ 5 ಗಂಟೆಗೆ ಮೈಸೂರಿನ ಕೆ.ಆರ್ ನಗರಕ್ಕೆ ತೆರಳಲಿದ್ದಾರೆ. ಇನ್ನೂ ಮುನ್ನೆಚ್ಚರಿಕ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಯೋಜಿಸಲಾಗಿದೆ.