ETV Bharat / state

ಕೋಡಿ ಬಿದ್ದ ಚಿತ್ರದುರ್ಗದ ಮಲ್ಲಾಪುರ ಕೆರೆ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು - Water infiltrated into the Lowland area.

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಕೆರೆ ಕಟ್ಟೆಗಳು ತುಂಬಿವೆ. ನಗರದ ಹೊರವಲಯದ ಮಲ್ಲಾಪುರ ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

Chitradurga
ಕೋಡಿ ಬಿದ್ದ ಚಿತ್ರದುರ್ಗದ ಮಲ್ಲಾಪುರ ಕೆರೆ..
author img

By

Published : Oct 10, 2020, 9:03 AM IST

Updated : Oct 10, 2020, 10:16 AM IST

ಚಿತ್ರದುರ್ಗ: ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ‌‌ ಮಳೆಯಿಂದಾಗಿ ಮಲ್ಲಾಪುರ ಕೆರೆ ಭರ್ತಿಯಾಗಿ ಕೋಡಿ ಬಿದ್ದಿದೆ.

ಚಿತ್ರದುರ್ಗ: ಕೋಡಿ ಬಿದ್ದ ಮಲ್ಲಾಪುರ ಕೆರೆ

ತಾಲೂಕಿನ ಮಲ್ಲಾಪುರ ಗ್ರಾಮದ ಬಳಿಯ ಕೆರೆ ಇದಾಗಿದ್ದು, ಮಲ್ಲಾಪುರ ಸೇರಿ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥವಾಗಿದೆ.‌ ಕೆರೆ ಕೋಡಿ ಬಿದ್ದಿದ್ದರಿಂದ ಹರಿಯುತ್ತಿರುವ ನೀರಿನ ದೃಶ್ಯವನ್ನು ಗ್ರಾಮಸ್ಥರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ರಸ್ತೆಯ ತುಂಬೆಲ್ಲಾ ಹರಿಯುತ್ತಿರುವ ನೀರನ್ನು ವೀಕ್ಷಿಸಲು ತಂಡೋಪತಂಡವಾಗಿ ಜನರು ಆಗಮಿಸುತ್ತಿದ್ದಾರೆ.

ಇನ್ನು ಹರಿಯುತ್ತಿರುವ ನೀರಿನಿಂದ ಆವರಿಸಿರುವ ರಸ್ತೆ ದಾಟಲಾಗದೆ ಮಹಿಳೆಯರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಯುವಕರ ಸಹಾಯದಿಂದ ಮಹಿಳೆಯರು ರಸ್ತೆ ದಾಟಿದರು.

Last Updated : Oct 10, 2020, 10:16 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.