ಚಿತ್ರದುರ್ಗ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಹಮ್ಮಿಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇನ್ನು ದಿನಾಂಕ 4 ರ ರಾತ್ರಿ 12 ಗಂಟೆಯಿಂದ 5 ರ ರಾತ್ರಿ 12ರ ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ನಿಷೇಧಾಜ್ಞೆ ಇರುವ ಸಮಯದಲ್ಲಿ ಗುಂಪು ಗೂಡುವುದು, ಸಾರ್ವಜನಿಕ ಸ್ಥಳಗಳಲ್ಲಿ ಸಿಹಿ ಹಂಚುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಕೋಮು ಗಲಭೆಗಳಾಗುವ ಸಂಭವ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಂಡು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ.
ಇನ್ನು ಎಲ್ಲಾ ಬಗೆಯ ಮದ್ಯದಂಗಡಿಗಳನ್ನು ತೆರೆಯದಂತೆ ನಿಷೇಧ ಹೇರಲಾಗಿದ್ದು, ಇಂದು ಸಂಜೆ 4 ಗಂಟೆಯಿಂದ 6ನೇ ತಾರೀಖು ಸಂಜೆ 6 ಗಂಟೆ ತನಕ ಮದ್ಯ ಮಾರಾಟ ನಿಷೇಧಿಸಲಾಗಿದೆ.