ಚಿತ್ರದುರ್ಗ: ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕಾಗಳಗೆರೆ ಗ್ರಾಮದಲ್ಲಿ ವಿಕಲಚೇತನ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದ್ದು, ಕೃತ್ಯ ನಡೆದ ಮೂರು ಗಂಟೆಯೊಳಗೆ ಆರೋಪಿಯನ್ನು ಬಂಧಿಸಲಾಗಿದೆ.
ಚಿಕ್ಕಜಾಜೂರು ಗ್ರಾಮ ರಮೇಶ್ (33) ಬಂಧಿತ ಆರೋಪಿ. ಭಾನುವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಕಲಚೇತನ ಮಹಿಳೆ ಮೇಲೆ ಆತ್ಯಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಸಂತ್ರಸ್ತೆಯ ತಾಯಿ ಹಾಗೂ ಸಹೋದರ ಮನೆಯಲ್ಲಿ ಇಲ್ಲದಿರುವುದನ್ನು ಗಮನಿಸಿದ ಆರೋಪಿ, ಮನೆಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಸಂತ್ರಸ್ತೆಯ ತಾಯಿ ಮನೆಗೆ ಮರಳಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಸಂತ್ರಸ್ತೆಯ ತಾಯಿ ಚಿಕ್ಕಜಾಜೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಚಿಕ್ಕಜಾಜೂರು ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.