ಚಿತ್ರದುರ್ಗ: ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಿಸುವ ಸಂಬಂಧ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಆದೇಶಿಸಿದ್ದಾರೆ.
ಕೇಂದ್ರೀಯ ಗೃಹ ಮಂತ್ರಾಲಯವು ಜುಲೈ 29 ರಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ತೆರವು-3 ಮಾರ್ಗಸೂಚಿಗಳನ್ನು ಆದೇಶಿಸಿದ್ದು, ಇವು ಆಗಸ್ಟ್ 31 ರವರೆಗೆ ಜಾರಿಯಲ್ಲಿರುತ್ತವೆ.
ಕೇಂದ್ರ ಸರ್ಕಾರವು ಹೊರಡಿಸಿರುವ ತೆರವು-3ರ ಅವಧಿಯಲ್ಲಿ ಅನುಮತಿಸಲಾದ ಚಟುವಟಿಕೆಗಳಲ್ಲಿ ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಧಾರ್ಮಿಕ ಕಾರ್ಯಗಳು ಮತ್ತು ಇತರೆ ಬೃಹತ್ ಸಭೆಗಳಿಗೆ ಅನುಮತಿ ನೀಡಿರುವುದಿಲ್ಲ.
ಅದರಂತೆ ರಾಜ್ಯ ಸರ್ಕಾರವು ಮಾರ್ಗಸೂಚಿಗಳನ್ನು ಯಥಾವತ್ತಾಗಿ ಪಾಲನೆ ಮಾಡಲು ಆದೇಶ ಹೊರಡಿಸಿದ್ದರಿಂದ ಈ ಬಾರಿ ಗಣೇಶೋತ್ಸವಕ್ಕೆ ಬ್ರೇಕ್ ಬೇಳಲಿದೆ. ಇದರ ಬಿಸಿ ಅದ್ಧೂರಿಯಾಗಿ ನಡೆಯುತ್ತಿದ್ದ ಹಿಂದೂ ಮಹಾಗಣಪತಿ ಉತ್ಸವಕ್ಕೂ ತಟ್ಟಿದ್ದು, ಅದ್ಧೂರಿಯಾಗಿ ನಡೆಯುತ್ತಿದ್ದ ಗಣೇಶೋತ್ಸವಕ್ಕೆ ಬ್ರೇಕ್ ಬೀಳಲಿದೆ.