ಚಿತ್ರದುರ್ಗ: ನಿಂತಿದ್ದ ಲಾರಿಗೆ ಓಮ್ನಿ ಕಾರು ಡಿಕ್ಕಿಯಾಗಿ ಓರ್ವ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರೇಣುಕಮ್ಮ (55), ಶಂಕರ್ ಪುಟ್ಟಲಿಂಗಯ್ಯ( 39), ಶಿವರಾಜು (55) ಮೃತ ದುರ್ದೈವಿಗಳಾಗಿದ್ದಾರೆ.
ಅಪಘಾತವಾಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಗೊಂಡವರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಚಿತ್ರದುರ್ಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.