ಚಿತ್ರದುರ್ಗ: ಟಿಪ್ಪರ್ ಲಾರಿಯೊಂದು ಇನೋವಾ ಕಾರಿಗೆ ಡಿಕ್ಕಿ ಹೊಡೆದಿದ್ದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಗರದ ರಾಷ್ಟ್ರೀಯ ಹೆದ್ದಾರಿ 04 ಮುರುಘಾ ಮಠದ ಬಳಿ ಈ ಘಟನೆ ಸಂಭವಿಸಿದ್ದು, ಎಲ್.ಕೆ.ಅತೀಕ್ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತವಾದ ಇನೋವಾ ಕಾರಿನಲ್ಲಿ ಪ್ರಧಾನ ಕಾರ್ಯದರ್ಶಿ ಅತೀಕ್ ಬೆಂಗಳೂರಿನಿಂದ ಬೆಳಗಾವಿಗೆ ಸರ್ಕಾರಿ ಕೆಲಸದ ನಿಮಿತ್ತ ಪ್ರಯಾಣ ಮಾಡುತ್ತಿರುವ ಸಂದರ್ಭದಲ್ಲಿ ನಗರದ ಮುರುಘಾ ಮಠದ ರಾಷ್ಟ್ರೀಯ ಹೆದ್ದಾರಿ 04 ರಲ್ಲಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ.
ಇನ್ನು ಚಾಲಕ ಮತ್ತು ಪ್ರಧಾನ ಕಾರ್ಯದರ್ಶಿ ಎಲ್.ಕೆ .ಅತೀಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ನಗರದ ಗ್ರಾಮಾಂತರ ಠಾಣೆಯ ಪೊಲೀಸರು ಹಾಗೂ ಸಂಚಾರ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.