ETV Bharat / state

ಸಿದ್ದರಾಮಯ್ಯ ವಿರುದ್ಧ ಸಚಿವ ಕೆ.ಎಸ್​. ಈಶ್ವರಪ್ಪ ಕಿಡಿ - Minister KS Eshwarappa

ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ, ಕಟೀಲ್ ಅವರಂತಹ ದೊಡ್ಡ-ದೊಡ್ಡ ನಾಯಕರ ಬಗ್ಗೆ ಮಾತನಾಡಿದ್ರೆ, ತಾನು ದೊಡ್ಡ ಮನುಷ್ಯನಾಗುತ್ತಾನೆ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್​. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಅಲ್ಲದೆ, ಅವರು ಪ್ರತಿಪಕ್ಷ ನಾಯಕನಾಗಿರಲು ಅರ್ಹರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

rural-development-minister-ks-eshwarappa-statement
ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿರಲು ಅಯೋಗ್ಯ..ಸಚಿವ ಕೆ.ಎಸ್​.ಈಶ್ವರಪ್ಪ ಕಿಡಿ
author img

By

Published : Nov 6, 2020, 12:42 PM IST

ಚಿತ್ರದುರ್ಗ: ಸಿದ್ದರಾಮಯ್ಯ ಪ್ರತಿಪಕ್ಷ ನಾಯಕನ ಸ್ಥಾನದಲ್ಲಿರಲು ಯೋಗ್ಯರಲ್ಲ. ಅವರಿಗೆ ಯಾವ ನಾಯಕರ ಬಗ್ಗೆ ಏನ್ ಮಾತಾಡ್ಬೇಕು, ಯಾವ್​ ರೀತಿ ಮಾತನಾಡಬೇಕು ಎಂಬುದೇ ಗೊತ್ತಿಲ್ಲ ಎಂದು ಸಚಿವ ಕೆ.ಎಸ್​. ಈಶ್ವರಪ್ಪ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಸಚಿವ ಕೆ.ಎಸ್​. ಈಶ್ವರಪ್ಪ ಕಿಡಿ

ಜಿಲ್ಲಾ ಪಂಚಾಯತ್ ಸಭೆಯಲ್ಲಿ ಭಾಗಿಯಾಗುವ ಮುನ್ನ ಮಾತನಾಡಿದ ಸಚಿವ ಈಶ್ವರಪ್ಪ ಅವರು, ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಅವರಂತಹ ದೊಡ್ಡ-ದೊಡ್ಡ ನಾಯಕರ ಬಗ್ಗೆ ಮಾತನಾಡಿದ್ರೆ ತಾನು ದೊಡ್ಡ ಮನುಷ್ಯನಾಗುತ್ತಾನೆ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯನವರಿದ್ದಾರೆ. ಹಿಂದೆ ನಿಮ್ಮನ್ನು ರಾಜ್ಯದ ಜನರು ಸಿಎಂ ಸ್ಥಾನದಲ್ಲಿ ಕೂರಿಸಿದ್ರೂ ನೀವು ಬದಲಾಗಲಿಲ್ಲ. ಆದ್ದರಿಂದ ಜನರು ನಿಮ್ಮನ್ನು ಸಿಎಂ ಸ್ಥಾ‌ನದಿಂದ ಕಿತ್ತಾಕಿದರು. ಆದರೂ ಕೂಡ ನಿಮಗೆ ಬುದ್ಧಿ ಬರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಚುನಾವಣೆ ಬಳಿಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಆಗುತ್ತೆ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ನಾಯಕತ್ವ ಬದಲಾವಣೆ ಮಾಡುತ್ತೇವೆ ಎಂದು ಸಿದ್ದರಾಮಯ್ಯನಿಗೆ ಮೋದಿ ನೇರವಾಗಿ ಬಂದು ಹೇಳಿದ್ದಾರೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಕೂಗು ಕೇಳಿ ಬರುತ್ತಿದೆ. ಶಾಸಕ ಜಮೀರ್ ಅಹ್ಮದ್​ ಅವರು ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಹೇಳಿದ್ರೆ, ಇತ್ತ ಸೌಮ್ಯ ರೆಡ್ಡಿ ಡಿಕೆಶಿ ಸಿಎಂ ಆಗುತ್ತಾರೆ ಎಂದು ಹೇಳುತ್ತಿದ್ದಾರೆ. ಈ ಇಬ್ಬರು ನಾಯಕರು ಸಿಎಂ ಆಗುವ ತಿರುಕನ ಕನಸು ಕಾಣುತ್ತಿದ್ದು, ಇಬ್ಬರ ಕನಸು ಹಗಲು ಕನಸಾಗಿಯೇ ಇರುತ್ತದೆ ಎಂದು ಈಶ್ವರಪ್ಪ ಟೀಕಿಸಿದರು.

ಇನ್ನು, ನಮ್ಮ ರಾಜ್ಯದಲ್ಲಿ ಲವ್ ಜಿಹಾದ್ ಮಾಡಲು ಅವಕಾಶ ನೀಡುವುದಿಲ್ಲ ಹಾಗೂ ಗೋಹತ್ಯೆ ನಿಷೇಧ ಮಾಡುತ್ತೇವೆ ಸಚಿವರು ಸ್ಪಷ್ಟಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.