ಚಿತ್ರದುರ್ಗ : ಶಾಲಾ ವಾಹನ ಪಲ್ಟಿಯಾಗಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಬಾಗೂರು ಬಳಿ ನಡೆದಿದೆ.
ಬಾಗೂರು ಗ್ರಾಮದಲ್ಲಿರುವ ವಿದ್ಯಾವಾಹಿನಿ ಶಾಲೆಗೆ ಸೇರಿದ ಬಸ್ ಪಲ್ಟಿಯಾಗಿದೆ. ಶಾಲೆಯಿಂದ ಮಕ್ಕಳನ್ನು ಮನೆಗೆ ಬಿಡಲು ತೆರಳುವಾಗ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.
ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಹೊಸದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೊಸದುರ್ಗ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.