ETV Bharat / state

ಅಕ್ರಮವಾಗಿ ಪಡಿತರ ದಾಸ್ತಾನು: ನ್ಯಾಯಬೆಲೆ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ - illegal rations in chitradurga

ಚಿತ್ರದುರ್ಗ ಜಿಲ್ಲೆ ದೇವದುರ್ಗ ತಾಲೂಕಿನ ನಾಗಡದಿನ್ನಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ದಾಸ್ತಾನು ಮಾಡಲಾಗಿದ್ದು, ತಹಶೀಲ್ದಾರ್​ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ದಾಸ್ತಾನು ವಶಪಡಿಸಿಕೊಂಡಿದ್ದಾರೆ.

Seizure of illegal rations in chitradurga
ನ್ಯಾಯಬೆಲೆ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ
author img

By

Published : May 2, 2020, 4:48 PM IST

ಚಿತ್ರದುರ್ಗ: ನ್ಯಾಯಬೆಲೆ ಅಂಗಡಿಯ ಪಡಿತರವನ್ನು ಅಕ್ರಮವಾಗಿ ದಾಸ್ತಾನು ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

Seizure of illegal rations in chitradurga
ನ್ಯಾಯಬೆಲೆ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ

ಜಿಲ್ಲೆಯ ದೇವದುರ್ಗ ತಾಲೂಕಿನ ನಾಗಡದಿನ್ನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಡಿತರ ಫಲಾನಿಭವಿಗಳಿಗೆ ಹಂಚಬೇಕಿದ್ದ ಅಕ್ಕಿ, ಎಣ್ಣೆ, ಉಪ್ಪು ಸೇರಿದಂತೆ ಎಲ್ಲವನ್ನು ಬೇರೆಡೆ ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತು.

ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ 40 ಚೀಲ ಅಕ್ಕಿ (20 ಕ್ವಿಂಟಾಲ್), 14 ಬಾಕ್ಸ್ ಎಣ್ಣೆ (140 ಲೀಟರ್), 25 ಉಪ್ಪಿನ ಪ್ಯಾಕೇಟ್, 8,900 ರೂ. ನಗದು ವಶಕ್ಕೆ ಪಡೆಯಲಾಗಿದೆ. ಈ ಪಡಿತರವನ್ನು 140 ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕಾಗಿತ್ತು. ಎರಡು ವರ್ಷದ ಹಿಂದಿನಿಂದ ಈ ಅಕ್ರಮ ದಾಸ್ತಾನು ಸಂಗ್ರಹಿಸಿ ಇರಿಸಲಾಗಿದೆ ಎನ್ನಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಬೆಲೆ ಅಂಗಡಿ ಮಾಲೀಕ ಭೀಮನಗೌಡ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.