ಚಿತ್ರದುರ್ಗ: 6ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.
ಅವಾರ್ಡ್ ಕಾರ್ಯಕ್ರಮಕ್ಕೆಂದು ವಿದ್ಯಾರ್ಥಿನಿಯನ್ನು ಚಿತ್ರದುರ್ಗಕ್ಕೆ ಕರೆತಂದಿದ್ದ ಮೊಳಕಾಲ್ಮೂರು ತಾಲೂಕಿನ ಗ್ರಾಮವೊಂದರ ಶಿಕ್ಷಕ ನರಸಿಂಹಸ್ವಾಮಿ, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿ ಶಿಕ್ಷಕನನ್ನು ಅಮಾನತುಗೊಳಿಸಿ ಡಿಡಿಪಿಐ ರವಿಶಂಕರ ರೆಡ್ಡಿ ಆದೇಶ ಹೊರಡಿಸಿದ್ದು, ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.