ETV Bharat / state

ಚಿತ್ರದುರ್ಗ: ಅತ್ಯಾಚಾರ ಸಂತ್ರಸ್ತೆ ಮನೆಗೆ ಶಾಂತವೀರ ಸ್ವಾಮೀಜಿ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ಹೊಳಲ್ಕೆರೆ ತಾಲೂಕಿನ ಭರಮಸಾಗರ ಗ್ರಾಮದ ಅತ್ಯಾಚಾರ ಸಂತ್ರಸ್ತೆ ಮನೆಗೆ ಕುಂಚಿಟಿಗ ಮಹಾಸಂಸ್ಥಾನದ ಶಾಂತವೀರ ಸ್ವಾಮೀಜಿ ಭೇಟಿ ನೀಡಿ, ಪೋಷಕರಿಗೆ ಧೈರ್ಯ ಹೇಳಿದರು.

Shantaweera Swamiji
ಅತ್ಯಾಚಾರ ಸಂತ್ರಸ್ತೆ ಮನೆಗೆ ಭೇಟಿ ನೀಡಿದ ಶಾಂತವೀರ ಸ್ವಾಮೀಜಿ
author img

By

Published : Jul 27, 2021, 12:59 PM IST

Updated : Jul 27, 2021, 1:12 PM IST

ಚಿತ್ರದುರ್ಗ: ಅತ್ಯಾಚಾರಕ್ಕೆ ಬಲಿಯಾದ ಜಿಲ್ಲೆಯ ಭರಮಸಾಗರದ ಬಾಲಕಿ ಮನೆಗೆ ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನದ ಶಾಂತವೀರ ಸ್ವಾಮೀಜಿ ಭೇಟಿ ನೀಡಿ, ಸಂತ್ರಸ್ತೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ದುಷ್ಕೃತ್ಯ ನಡೆಸಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು ಎಂದು ಸ್ವಾಮೀಜಿ ಆಗ್ರಹಿಸಿದರು.

ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಭರಮಸಾಗರ ಗ್ರಾಮದ ಬಾಲಕಿ ಮನೆಗೆ ಭೇಟಿ ನೀಡಿದ ಸ್ವಾಮೀಜಿ, ಅತ್ಯಾಚಾರ ಆರೋಪಿಗಳಿಗೆ ಯಾವುದೇ ಕಾರಣಕ್ಕೂ ರಕ್ಷಣೆ ನೀಡಬಾರದು. ಇಂತಹ ಕೃತ್ಯ ಎಸಗಿದವರ ಬಗ್ಗೆ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಇದರಿಂದ ಗ್ರಾಮದ ಎಲ್ಲ ಮಹಿಳೆಯರಿಗೂ ರಕ್ಷಣೆ ನೀಡಿದಂತಾಗುತ್ತದೆ. ದುಷ್ಕರ್ಮಿಗಳು ಬಂಧನಕ್ಕೊಳಗಾದಾಗ ನೊಂದವರಿಗೆ ನ್ಯಾಯ ಸಿಕ್ಕಂತಾಗುತ್ತದೆ. ಇದೊಂದು ಪೈಶಾಚಿಕ ಕೃತ್ಯ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ನೊಂದ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಪ್ರಾರ್ಥಿಸಿದರು.

ಈ ವೇಳೆ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಡಿವಾಳ ಮಾಚಿದೇವ ಸ್ವಾಮೀಜಿ, ಭಗೀರಥ ಪೀಠದ ಪುರುಷೋತ್ತಮಾನಂದ ಸ್ವಾಮೀಜಿ ಜೊತೆಗಿದ್ದರು.

ಇದನ್ನೂ ಓದಿ: ಮೊಟ್ಟೆ ಡೀಲ್ ಪ್ರಕರಣ: ಸಚಿವೆ ಶಶಿಕಲಾ ಜೊಲ್ಲೆ, ಪರಣ್ಣ ಮುನವಳ್ಳಿ ಸೇರಿ ನಾಲ್ವರ ವಿರುದ್ಧ ದೂರು

Last Updated : Jul 27, 2021, 1:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.