ETV Bharat / state

ಚಿತ್ರದುರ್ಗ ಜಿ.ಪಂ ಅಧ್ಯಕ್ಷ ಸ್ಥಾನ 'ಕೈ' ತೆಕ್ಕೆಗೆ: ಶಶಿಕಲಾ ಅವಿರೋಧ ಆಯ್ಕೆ

ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜನ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್​ನ ಶಶಿಕಲಾ ಸುರೇಶ್ ಬಾಬು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ‌.

Shashikala Suresh Babu unanimously elected President of Chitradurga
ಚಿತ್ರದುರ್ಗ ಜಿ.ಪಂ ಅಧ್ಯಕ್ಷ ಸ್ಥಾನ 'ಕೈ' ತೆಕ್ಕೆಗೆ: ಶಶಿಕಲಾ ಸುರೇಶ್ ಬಾಬು ಅವಿರೋಧ ಆಯ್ಕೆ
author img

By

Published : May 22, 2020, 9:35 PM IST

ಚಿತ್ರದುರ್ಗ: ವಿಶಾಲಾಕ್ಷಿ ನಟರಾಜನ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದ್ದು, ಮಸ್ಕಲ್ ಕ್ಷೇತ್ರದ ಸದಸ್ಯೆ ಶಶಿಕಲಾ ಸುರೇಶ್ ಬಾಬು ಅವಿರೋಧವಾಗಿ ಆಯ್ಕೆಯಾಗಿದ್ದಾರೆ‌.

ಚಿತ್ರದುರ್ಗ ಜಿ.ಪಂ ಅಧ್ಯಕ್ಷ ಚುನಾವಣೆ

ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜನ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಒಟ್ಟು 37 ಸದಸ್ಯರ ಬಲದಲ್ಲಿ ಕಾಂಗ್ರೆಸ್ 23 ಸದಸ್ಯರ ಪೈಕಿ ಓರ್ವ ಸದಸ್ಯೆ ಸೌಭಾಗ್ಯ ಬಸವರಾಜನ್ ಪಕ್ಷದಿಂದ ಉಚ್ಚಾಟಿತರಾಗಿದ್ದಾರೆ. ಉಳಿದ್ದಂತೆ ಬಿಜೆಪಿ- 10, ಜೆಡಿಎಸ್ ಮತ್ತು ಪಕ್ಷೇತರರು ತಲಾ ಇಬ್ಬರು ಸದಸ್ಯರನ್ನು ಹೊಂದಿದ್ದಾರೆ.

ಚುನಾವಣೆಯಲ್ಲಿ ಕಾಂಗ್ರೆಸ್​​​ನ 22 ಸದಸ್ಯರು, ಬಿಜೆಪಿ ಮತ್ತು ಜೆಡಿಎಸ್​ನಿಂದ ತಲಾ ಓರ್ವ ಹಾಗೂ ಇಬ್ಪರು ಪಕ್ಷೇತರ ಸೇರಿ 26 ಸದಸ್ಯರು ಭಾಗಿಯಾಗಿದ್ದರು. ಕಾಂಗ್ರೆಸ್​ನಿಂದ ಶಶಿಕಲಾ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಹಾಗೂ ಜೆಡಿಎಸ್‌ನಿಂದ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ. ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತ ವಿ.ಪಿ ಇಕ್ಕೇರಿಯವರು ಶಶಿಕಲಾ ಸುರೇಶ್ ಬಾಬು ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.