ಚಿತ್ರದುರ್ಗ: ಅಗ್ನಿ ಅನಾಹುತಕ್ಕೆ ನೂರಾರು ಕುರಿಗಳು ಸಾವನ್ನಪ್ಪಿರುವ ಘಟನೆ ಕೋಟೆನಾಡಿನ ಹೊಳಲ್ಕೆರೆ ತಾಲೂಕಿನ ನಂದನ ಹೊಸೂರು ಸಮೀಪದ ಗುಂಡಿಕೆರೆ ಗ್ರಾಮದಲ್ಲಿ ನಡೆದಿದೆ.
ಬೆಟ್ಟದಲ್ಲಿ ಮೇಯುತ್ತಿದ್ದ 250ಕ್ಕೂ ಹೆಚ್ಚು ಕುರಿಗಳು ಬಲಿಯಾಗಿದ್ದು, ಇವು ಅಮೃತಾಪುರ ಗ್ರಾಮದ ನಿವಾಸಿ ತಿಮ್ಮಪ್ಪ ಎಂಬುವರಿಗೆ ಸೇರಿದ ಕುರಿಗಳು ಎಂದು ತಿಳಿದುಬಂದಿದೆ. ಬೆಟ್ಟದಲ್ಲಿ ಹೊತ್ತಿಕೊಂಡಿದ್ದ ಬೆಂಕಿಗೆ ಸಿಲುಕಿ ಕುರಿಗಳು ಅರೆಬರೆ ಬೆಂದಿದ್ದು, ಕುರಿಗಾಹಿಗಳ ಆಕ್ರಂದನ ಮುಗಿಲು ಮುಟ್ಟಿದೆ.
ಸುಮಾರು ಐದು ಲಕ್ಷ ಮೌಲ್ಯದ ಕುರಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಘಟನ ಸ್ಥಳಕ್ಕೆ ಚಿತ್ರಹಳ್ಳಿ ಪಿಎಸ್ಐ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.