ETV Bharat / state

ವರುಣಾದಿಂದ ಸ್ಪರ್ಧಿಸುವಂತೆ ನಮ್ಮ ಮನೆಯಲ್ಲಿ ಸಲಹೆ ನೀಡಿದ್ದಾರೆ: ಸಿದ್ದರಾಮಯ್ಯ - Siddaramaiah

ನಮ್ಮ ಮನೆಯಲ್ಲಿ ವರುಣಾ ಕ್ಷೇತ್ರದಲ್ಲೇ ಸ್ಪರ್ಧೆ ಮಾಡಿ ಎಂದು ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
author img

By

Published : Mar 24, 2023, 11:02 PM IST

ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ

ಚಿತ್ರದುರ್ಗ: ಬರುವ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರ ಹುಡುಕಾಟದಲ್ಲಿ ತೊಡಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸುಮಾರು 25 ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಆಹ್ವಾನವಿದೆ. ಆಯಾ ಆಯಾ ಕ್ಷೇತ್ರದಲ್ಲಿ ಕಾರ್ಯಕರ್ತರು ಆಹ್ವಾನ ನೀಡುತ್ತಿದ್ದಾರೆ. ಆದರೆ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವುದು ಸಾಧ್ಯವಿಲ್ಲ. ನಮ್ಮ ಮನೆಯಲ್ಲಿ ವರುಣಾದಲ್ಲಿ ಸ್ಫರ್ಧೆ ಮಾಡಿ ಎಂದು ಹೇಳಿದ್ದಾರೆ. ಹೀಗಾಗಿ ಪಕ್ಷದಿಂದ ವರುಣಾ ಕ್ಷೇತ್ರದಲ್ಲೇ ಟಿಕೆಟ್ ನೀಡುವಂತೆ ಹೇಳಿದ್ದೇನೆ. ಇನ್ನೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆಯೂ ನಮ್ಮ ಮನೆಯಲ್ಲಿ ಹೇಳ್ತಿದ್ದಾರೆ ಎಂದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಸೋಲುಕಂಡು, ಬಾದಾಮಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು.

ಕಾರ್ಯಕರ್ತರು ಆಹ್ವಾನ ನೀಡುತ್ತಿದ್ದಾರೆ-ಸಿದ್ಧರಾಮಯ್ಯ: ಇದೀಗ ಬಾದಾಮಿ ಕ್ಷೇತ್ರ ಬಿಟ್ಟು ಕೋಲಾರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಇದೀಗ ಕೋಲಾರ ಬಿಟ್ಟು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಸಿದ್ದರಾಮಯ್ಯ ಉತ್ಸಾಹ ತೋರಿದ್ದಾರೆ. ನನಗೆ ಸುಮಾರು 25 ಕ್ಷೇತ್ರಗಳಲ್ಲಿ ಕಾರ್ಯಕರ್ತರು ಸ್ಪರ್ಧಿಸುವಂತೆ ಆಹ್ವಾನ ನೀಡಿದ್ದಾರೆ. ಆಯಾ ಕ್ಷೇತ್ರದಲ್ಲಿ ಕಾರ್ಯಕರ್ತರು ಆಹ್ವಾನ ನೀಡುತ್ತಿದ್ದಾರೆ ಎಂದು ತಿಳಿಸಿದರು. ಇಂದು ಬಾದಾಮಿ‌ ಕ್ಷೇತ್ರದಲ್ಲಿ ರೋಡ್ ಶೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಪಕ್ಷದ ವಿಚಾರ ಹಾಗೂ ಟಿಕೆಟ್ ವಿಚಾರಗಳು ಸೇರಿದಂತೆ ಎಲ್ಲಾ ನಿರ್ಧಾರ ಹೈಕಮಾಂಡ್​ಗೆ ಬಿಟ್ಟಿದ್ದೇನೆಂದು ಹೇಳಿದರು.

ಬಿಜೆಪಿ ಹಿಂದೂ-ಮುಸ್ಲಿಂ ಅಣ್ಣ ತಮ್ಮಿಂದರಂತೆ ಕಾಣುತ್ತದೆ ಎಂದು ಬಿಎಸ್​ವೈ ಹೇಳಿಕೆ ವಿಚಾರಕ್ಕೆ ಮಾತನಾಡಿದ ಸಿದ್ದರಾಮಯ್ಯ, ಭಾರತೀಯ ಜನತಾ ಪಾರ್ಟಿಯವರು ಯಾಕೆ ಮುಸ್ಲಿಂ ಸಮುದಾಯವರಿಗೆ ಟಿಕೆಟ್ ನೀಡುತ್ತಿಲ್ಲ ಮತ್ತು ಸಚಿವ ಸ್ಥಾನ ನೀಡಿಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕ್ಷೇತ್ರದ ತೀರ್ಮಾನ ಹೈಕಮಾಂಡ್​ಗೆ ಬಿಟ್ಟಿದ್ದೇನೆ-ಸಿದ್ದರಾಮಯ್ಯ: ಇನ್ನೊಂದೆಡೆ ಹೈಕಮಾಂಡ್ ಎಲ್ಲಿ ಹೇಳುತ್ತಾರೆ ಅಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ. ಸುಮಾರು 20 ರಿಂದ 25 ಕ್ಷೇತ್ರದಲ್ಲಿ ಕರೆಯುತ್ತಿದ್ದಾರೆ. ಎಲ್ಲ ಕಡೆ ನಿಲ್ಲುವುದಕ್ಕೆ ಆಗಲ್ಲ. ಅದಕ್ಕೆ ಕ್ಷೇತ್ರದ ತೀರ್ಮಾನವನ್ನು ನಾನು ಹೈಕಮಾಂಡ್​ಗೆ ಬಿಟ್ಟಿದ್ದೀನಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಾದಾಮಿಗೆ ಆಗಾಗ ಬರುತ್ತಾ ಇರುತ್ತೇನೆ. ಸಿದ್ದರಾಮಯ್ಯಗೆ ಕ್ಷೇತ್ರ ಸಿಗುತ್ತಿಲ್ಲ ಎನ್ನುವ ಬಿಜೆಪಿ ನಾಯಕರ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಗದೆ ಇರುವ ತರಹ ಇದ್ದರೆ 20 ಕಡೆ ಯಾಕೆ ಕರೀತಾರೆ ಎಂದು ಅವರು ಮರು ಪ್ರಶ್ನೆ ಮಾಡಿದರು. ನನಗೆ ಯಾವುದೇ ಕ್ಷೇತ್ರ ಇಲ್ಲದೆ ಇದ್ದರೆ ಯಾಕೆ ಕರೀತಾರೆ. ಸೋಲುವವರನ್ನು ಕರೀತಾರಾ?. ಗೆಲ್ಲುವವರನ್ನು ಕರೀತಾರಾ? ಅಭಿಮಾನ ಪ್ರೀತಿಯಿಂದ ಕರೀತಾರೆ. ಮತ್ತೆ ಕ್ಷೇತ್ರ ಇಲ್ಲ ಹೇಗೆ ಅಂತಾರೆ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ : ರಾಹುಲ್ ಗಾಂಧಿ ಅನರ್ಹತೆ ವಿಚಾರ: ಸತ್ಯ ಹೇಳಿದವರಿಗೆ ಬಿಜೆಪಿ ಶಿಕ್ಷೆ ಕೊಡಲು ಹೊರಟಿದೆ ಎಂದ ಸಿದ್ಧರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.