ಚಿತ್ರದುರ್ಗ: ಕಾಂಗ್ರೆಸ್ನ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ವಿರುದ್ಧ ಜಿಲ್ಲಾಡಳಿತ ಉದ್ದೇಶಪೂರ್ವಕವಾಗಿ ಪ್ರಕರಣ ದಾಖಲಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು.
ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ್ದ ಕಾರ್ಯಕರ್ತರು, ಸಚಿವ ಶ್ರೀರಾಮುಲು ಅವರಿಗೆ ಒಂದು ನ್ಯಾಯ, ಮಾಜಿ ಶಾಸಕರಿಗೊಂದು ನ್ಯಾಯವೇ? ಎಂದು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ತಕ್ಷಣ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು, ಇಲ್ಲವೇ ಶ್ರೀರಾಮುಲು ವಿರುದ್ಧ ಲಾಕ್ಡೌನ್ ನಿಯಮ ಉಲ್ಲಂಘನೆ ಎಂದು ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಹೆಚ್. ಆಂಜನೇಯ, ಮಾಜಿ ಸಂಸದ ಚಂದ್ರಪ್ಪ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.