ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧ ದಾಖಲಾಗಿರುವ ಪೋಕ್ಸೋ ಕೇಸ್ ಹಾಗೂ ಶ್ರೀಗಳ ಅಕ್ರಮ ಕೂಟದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜೊತೆಗೆ ಮಠಕ್ಕೆ ಹೊಸ ಆಡಳಿತಾಧಿಕಾರಿ ನೇಮಿಸುವಂತೆ ಆಗ್ರಹಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಾಮಾಜಿಕ ಕಾರ್ಯಕರ್ತ ಡಾ.ಮಧುಕುಮಾರ್ ಪತ್ರ ಬರೆದಿದ್ದಾರೆ.
ಮುರುಘಾ ಶ್ರೀ ವಿರುದ್ಧ 2ನೇ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆ ಪ್ರಭಾರ ಪೀಠಾಧ್ಯಕ್ಷರ ನೇಮಕಕ್ಕೆ ನಿರ್ಧಾರ ಮಾಡಲಾಗಿದ್ದು, ದಾವಣಗೆರೆಯ ವಿರಕ್ತ ಮಠದ ಬಸವಪ್ರಭು ಶ್ರೀ ಹೆಸರನ್ನು ಅಂತಿಮಗೊಳಿಸಲಾಗಿದೆ.
ಇದನ್ನೂ ಓದಿ: ಮುರುಘಾ ಮಠದ ಪ್ರಭಾರ ಪೀಠಾಧ್ಯಕ್ಷರ ನೇಮಕ: ದಾವಣಗೆರೆ ವಿರಕ್ತ ಮಠದ ಬಸವಪ್ರಭು ಹೆಸರು ಅಂತಿಮ
ಇದೀಗ ಹಲವರಿಂದ ಧಾರ್ಮಿಕ ಚಟುವಟಿಕೆಗೆ ಅಡ್ಡಿಯಾಗುತ್ತಿದೆ. ಮಠದ ಕೋಟ್ಯಂತರ ಹಣ ದುರುಪಯೋಗ ಆಗುತ್ತಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ. ಕೆಲವರು ನೂರಾರು ಕೋಟಿ ಚರಾಸ್ಥಿ ಮತ್ತು ಸ್ಥಿರಾಸ್ತಿ ಮೇಲೆ ಕಣ್ಣು ಹಾಕಿದ್ದಾರೆ. ಹೀಗಾಗಿ, ಮಠದ ರಕ್ಷಣೆಗೆ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಬೇಕು. ಘನ ಘೋರ ಆರೋಪ ಹೊತ್ತಿರುವ ಸ್ವಾಮೀಜಿಯನ್ನ ಪದಚ್ಯುತಿ ಮಾಡುವಂತೆ ಸಿಎಂ ಬೊಮ್ಮಾಯಿಗೆ ಪತ್ರದಲ್ಲಿ ಡಾ. ಮಧುಕುಮಾರ್ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಎಸ್‌ಜೆಎಂ ವಿದ್ಯಾಪೀಠದ ಅಧಿಕಾರ ಹಸ್ತಾಂತರಿಸಿದ ಮುರುಘಾ ಶರಣರು