ಚಿತ್ರದುರ್ಗ: ಸಿದ್ದರಾಮಯ್ಯ ಮೂಲ ಕಾಂಗ್ರೆಸ್ಸಿನಲ್ಲ, ವಲಸಿಗ ಎಂದು ಆರೋಗ್ಯ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು.
ಜಿಲ್ಲೆಯ ಮೊಳಕಾಲ್ಮೂರು ತಾಲೂಕು ಬಾಂಡ್ರವಿ ಗ್ರಾಮದಲ್ಲಿ ಸಿದ್ದರಾಮಯ್ಯ ಬಿಜೆಪಿಗೆ ಬರಲಿದ್ದಾರೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜೆಡಿಎಸ್ನಿಂದ ಕಾಂಗ್ರೆಸ್ಗೆ ಜಿಗಿದವರು. ಜೆಡಿಎಸ್ನಲ್ಲಿ ಉಪಮುಖ್ಯಮಂತ್ರಿ ಮಾಡಲಿಲ್ಲ ಅಂತ ಕಾಂಗ್ರೆಸ್ ಸೇರಿದ್ರು. ಅದ್ರೆ ಕಾಂಗ್ರೆಸ್ನಿಂದ ಎಲ್ಲಿಗೆ ಜಿಗಿಯುತ್ತಾರೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.
ಮುಖ್ಯಮಂತ್ರಿ ಮಾಡ್ತೀವಿ ಅಂದ್ರೆ ಯಾರ ಹಿಂದೆ ಬೇಕಾದರು ಹೋಗ್ತಾರೆ. ಪಕ್ಷದಿಂದ ಪಕ್ಷಕ್ಕೆ ಪಕ್ಷಾಂತರ ಮಾಡುವ ವ್ಯಕ್ತಿ ಸಿದ್ದರಾಮಯ್ಯ. ಸಿದ್ಧಾಂತ ಹಿಡಿದುಕೊಂಡು ರಾಜಕಾರಣ ಮಾಡುವ ಮನುಷ್ಯನಲ್ಲ ಎಂದರು. ಆಪರೇಷನ್ ಕಮಲ ಮತ್ತೆ ಮಾಡಿದ್ರೆ ಜನ ಅಟ್ಟಾಡಿಸಿಕೊಂಡು ಹೊಡೆಯುತ್ತಾರೆಂಬ ಸಿದ್ದು ಹೇಳಿಕೆಗೆ ತಿರುಗೇಟು ನೀಡಿದ ಸಚಿವರು ಜನ ಈಗಾಗಲೇ ದೇಶದಾದ್ಯಂತ ಕಾಂಗ್ರೆಸನ್ನು ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಯಾವ ರಾಜ್ಯದಲ್ಲೂ ಬಹುಮತ ಇಲ್ಲದ ಸ್ಥಿತಿಗೆ ಕಾಂಗ್ರೆಸ್ ತಲುಪಿದ್ದು, ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಸ್ತಿತ್ವವೇ ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದರು.
ಇನ್ನು ಹೈದ್ರಾಬಾದ್ ಅತ್ಯಾಚಾರಿಗಳ ಎನ್ ಕೌಂಟರ್ ಬಗ್ಗೆ ಪ್ರತಿಕ್ರಿಯಿಸಿದ ಅವರು ಕನ್ನಡಿಗ ವಿಶ್ವನಾಥ್ ಸಜ್ಜನ್ ಕಾರ್ಯವನ್ನು ದೇಶವೇ ಕೊಂಡಾಡುತ್ತಿದೆ. ಅತ್ಯಾಚಾರ ಎಸಗುವವರಿಗೆ ಕನ್ನಡಿಗ ಸಜ್ಜನ್ ಕಠಿಣ ಎಚ್ಚರಿಕೆಯ ಸಂದೇಶ ನೀಡಿದ್ದಾರೆ ಎಂದು ಅವರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದರು.