ETV Bharat / state

ಚಿತ್ರದುರ್ಗದಲ್ಲಿ ಪಾಳು ಬಿದ್ದ ಗೃಹಮಂಡಳಿ ಮನೆಗಳು: ಸಾರ್ವಜನಿಕರ ಆಕ್ರೋಶ - The ruined house in Chitradurga

ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ಕಾರದ ವಸತಿ ಯೋಜನೆ ಮಣ್ಣು ಪಾಲಾಗುತ್ತಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ. ಈ ಕುರಿತು ಗೃಹ ಮಂಡಳಿ ಅಧಿಕಾರಿಗಳನ್ನು ಕೇಳಿದರೆ ಈಗಾಗಲೇ 25 ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ನೀಡಿದ್ದೇವೆ ಅಂತಿದ್ದಾರೆ.

Chaos homes of Housing Board in Chitradurga
ಗೃಹ ಮಂಡಳಿ ಮನೆಗಳ ಅವ್ಯವಸ್ಥೆ
author img

By

Published : Mar 2, 2021, 7:33 PM IST

ಚಿತ್ರದುರ್ಗ: ಕಡಿಮೆ ದರದಲ್ಲಿ ಬಡಜನರಿಗೆ ವಾಸಿಸಲು ಮನೆಗಳು ಸಿಗುವಂತಾಗಬೇಕು ಎಂದು ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಈ ನಿಟ್ಟಿನಲ್ಲಿ ಸರ್ಕಾರ ಪ್ರತಿ ವರ್ಷವೂ ಕೋಟಿ ಕೋಟಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಈ ಬಡಾವಣೆಯಲ್ಲಿ ನಿರ್ಮಾಣವಾದ ವಸತಿಗೃಹಗಳು ದಿಕ್ಕು ದೆಸೆ ಇಲ್ಲದಂತಾಗಿ, ಸರ್ಕಾರದ ಯೋಜನೆ ಹಳ್ಳ ಹಿಡಿದಂತಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಸಾರ್ವಜನಿಕರ ಆಕ್ರೋಶ

ಚಿತ್ರದುರ್ಗದ ಮದಕರಿಪುರದಲ್ಲಿ ಜನರಿಗೆ ಕಡಿಮೆ ಹಣದಲ್ಲಿ ಮನೆಗಳನ್ನು ನೀಡಲು ಕಳೆದ ಹತ್ತು ವರ್ಷಗಳ ಹಿಂದೆ ಈ ಬಡಾವಣೆಯಲ್ಲಿ ಕರ್ನಾಟಕ ಗೃಹ ಮಂಡಳಿ ಇಲಾಖೆ 30 ಮನೆಗಳನ್ನು ನಿರ್ಮಿಸಿದೆ. ಯೋಜನೆಯ ಮನೆಗಳು ಫಲಾನುಭವಿಗಳಿಗೆ ಹಂಚಿಕೆಯಾಗದೆ ಸರ್ಕಾರದ ಯೋಜನೆ ಹಳ್ಳ ಹಿಡಿದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಧಿಕಾರಿಗಳು ಬಡ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡದೆ ನಿರ್ಲಕ್ಷ್ಯ ತೋರಿದ ಪರಿಣಾಮ, ಈ ನಿಲಯಗಳು ಪಾಳು ಬಿದ್ದಿವೆ. ಅಧಿಕಾರಿಗಳ ನಿರ್ಲಕ್ಷದಿಂದ ಗೃಹ ಮಂಡಳಿಯ ಮನೆಗಳು‌ ಹಾಳಾಗಿವೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ಕಾರದ ವಸತಿ ಯೋಜನೆ ಮಣ್ಣು ಪಾಲಾಗುತ್ತಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ. ಈ ಕುರಿತು ಗೃಹ ಮಂಡಳಿ ಅಧಿಕಾರಿಗಳನ್ನು ಕೇಳಿದರೆ ಈಗಾಗಲೇ 25 ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ನೀಡಿದ್ದೇವೆ. 5 ಮನೆಗಳು ಮಾತ್ರ ಸೇಲ್ ಆಗಿಲ್ಲ. ಮೂಲಸೌಕರ್ಯ ವ್ಯವಸ್ಥೆ ಮಾಡಲಾಗಿದೆ. ಆದರೆ ಫಲಾನುಭವಿಗಳು ವಾಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಮನೆ ನಿರ್ಮಿಸಿದ ಬಳಿಕ ನಾವು ಪಂಚಾಯತ್​ಗೆ ಹಸ್ತಾಂತರಿಸಿದ್ದೇವೆ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಮಣ್ಣು ಪಾಲಾಗುತ್ತಿದ್ದು, ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಕಟ್ಟಿದ ಮನೆಗಳು, ಇಂದು ವಾಸಕ್ಕೆ ಯೋಗ್ಯವಿಲ್ಲದಂತಾಗಿದ್ದು, ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.