ಚಿತ್ರದುರ್ಗ/ದಾವಣಗೆರೆ : ಒಂದೆಡೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ತನ್ನ ತೀವ್ರತೆ ಪಡೆಯುತ್ತಿದೆ. ಇನ್ನೊಂದೆಡೆ ಸರ್ಕಾರಿ ಕಾರ್ಯಕ್ರಮಗಳ ಹೆಸರಿನಲ್ಲಿ ಜನಪ್ರತಿನಿಧಿಗಳೇ ಕೋವಿಡ್ ನಿಯಮ ಗಾಳಿಗೆ ತೂರುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿಯಲ್ಲಿ ಬಾಷ್ ಸಂಸ್ಥೆ ಸಿಎಸ್ಆರ್ ಅನುದಾನದಡಿ ನೂತನ ಹೈಟೆಕ್ ಶಾಲೆ ನಿರ್ಮಾಣ ಮಾಡಲಾಗಿದೆ. ಇದರ ಉದ್ಘಾಟನೆ ವೇಳೆ ಕೋವಿಡ್ ನಿಯಮ ಉಲ್ಲಂಘಿಸಲಾಗಿದೆ.
ನೂರಾರು ಜನರು, ವಿದ್ಯಾರ್ಥಿಗಳು ಮಾಸ್ಕ್, ಸಾಮಾಜಿಕ ಅಂತರ ಗಾಳಿಗೆ ತೂರಿ ಅದ್ದೂರಿ ಸಮಾರಂಭ ಮಾಡಿದ್ದಾರೆ. ಸಂಸದ ಎ.ನಾರಾಯಣಸ್ವಾಮಿ, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಕಾರ್ಯಕ್ರಮದಲ್ಲಿದ್ದರು.
ಇನ್ನು, ದಾವಣಗೆರೆ ರೈಲ್ವೆ ನಿಲ್ದಾಣ ನವೀಕರಣ ಗೊಂಡಿದೆ. ಉದ್ಘಾಟನೆ ಸಮಾರಂಭದಲ್ಲಿ ಸಂಸದ ಜಿ ಎಂ ಸಿದ್ದೇಶ್ವರ್ ಜನರನ್ನು ಗುಂಪುಗೂಡಿಸಿಕೊಂಡು, ಸಾಮಾಜಿಕ ಅಂತರವಿಲ್ಲದೆ ಕಾರ್ಯಕ್ರಮ ಉದ್ಘಾಟಿಸಿದರು. ಜನರಿಗೆ ಜಾಗೃತಿ ಮೂಡಿಸುವ ಜನಪ್ರತಿನಿಧಿಗಳೇ ಈ ರೀತಿ ನಿಯಮ ಉಲ್ಲಂಘಿಸಿದರೆ ಹೇಗೆ ಅನ್ನೋ ಪ್ರಶ್ನೆ ಜನಸಾಮಾನ್ಯರಲ್ಲಿ ಮೂಡಿದೆ.
ಇದನ್ನೂ ಓದಿ.. ವಾರಣಾಸಿಗೆ ಬರಲು ನಿಮಗೆ ಸ್ವಾಗತ: ದೀದಿಗೆ ಓಪನ್ ಚಾಲೆಂಜ್ ಹಾಕಿದ ನಮೋ