ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಖದೀಮರು ಮನೆಗಳ್ಳತನ ಮಾಡಿರುವ ಘಟನೆ ನಡೆದಿದೆ.
ನಗರದ ಉದ್ಯಮಿ ನಾಗರಾಜ ಎಂಬುವರ ಮನೆಗೆ ಕಳ್ಳರು ಕನ್ನ ಹಾಕಿ ಬೀರುನಲ್ಲಿದ್ದ ಚಿನ್ನಾಭರಣ, ನಗದು ಕದ್ದು ಪರಾರಿಯಾಗಿದ್ದಾರೆ. ಮನೆಯಲ್ಲಿದ್ದ ನಗದನ್ನು ಕದ್ದಿರುವ ಖದೀಮರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ಎಷ್ಟು ಹಣ ಕಳ್ಳತನವಾಗಿದೆ ಎಂದು ಮಾಹಿತಿ ಲಭ್ಯವಾಗಿಲ್ಲ.
ಈ ಸಂಬಂಧ ಚಳ್ಳಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.