ಚಿತ್ರದುರ್ಗ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಸಂಬಂಧಿಸಿದಂತೆ 58 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 54 ವರದಿ ನೆಗೆಟಿವ್ ಬಂದಿದೆ. 01 ವರದಿ ಬರುವುದು ಬಾಕಿ ಇದೆ. ಸದ್ಯ ಜಿಲ್ಲೆಯಲ್ಲಿ 2,265 ಜನ ಹೋಂ ಕ್ವಾರಂಟೈನ್‍ನಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿಯೇ ಇದೀಗ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಪರೀಕ್ಷಾ ಪ್ರಯೋಗಾಲಯ ಕಾರ್ಯ ನಿರ್ವಹಿಸುತ್ತಿದ್ದು, ಜೂ.23ರಂದು 58 ಶಂಕಾಸ್ಪದ ವ್ಯಕ್ತಿಗಳ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 54 ಜನರ ಪ್ರಯೋಗಾಲಯ ವರದಿ ನೆಗೆಟಿವ್ ಬಂದಿದೆ. ಉಳಿದ 03 ಮಾದರಿಗಳು ಇತರೆ ಕಾರಣಗಳಿಗೆ ತಿರಸ್ಕೃತಗೊಂಡಿದ್ದು, 01 ವರದಿ ಬರುವುದು ಬಾಕಿ ಇದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 45 ಇದ್ದು, ಎಲ್ಲ 43 ಜನ ಈಗಾಗಲೆ ಗುಣಮುಖರಾಗಿದ್ದಾರೆ. ಈವರೆಗೆ 44,500 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,323 ಜನರ ವರದಿ ನೆಗೆಟಿವ್ ಬಂದಿದೆ, ಉಳಿದ 133 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃಗೊಂಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ತಿಳಿಸಿದ್ದಾರೆ.