ಚಿತ್ರದುರ್ಗ: ಜಿಲ್ಲೆಯಲ್ಲಿ ಭಾರಿ ದುರಂತವೊಂದು ಸಂಭವಿಸಿದೆ. ವಿಷಾಹಾರ ಸೇವಿಸಿ ಮೂವರು ಮೃತಪಟ್ಟಿದ್ದರೆ, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ.
ನಿನ್ನೆ ತ್ರಿ (ರಾಮಂಗಳವಾರ) ರಾಗಿಮುದ್ದೆ, ಕಾಳು ಸಾಂಬಾರ್ ಸೇವಿಸಿದ್ದ ಒಂದೇ ಕುಟುಂಬದ ಐವರು ಅಸ್ವಸ್ಥರಾಗಿದ್ದು, ಗ್ರಾಮಸ್ಥರು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ತಿಪ್ಪಾನಾಯ್ಕ್, ಪತ್ನಿ ಸುಧಾಬಾಯಿ, 75 ವರ್ಷದ ವೃದ್ಧೆ ಗುಂಡಿಬಾಯಿ ಮೃತಪಟ್ಟಿದ್ದಾರೆ.
ರಾಹುಲ್ (18), ರಮ್ಯ (16) ತೀವ್ರ ಅವರು ಅಸ್ವಸ್ಥರಾಗಿದ್ದು, ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಬ್ರಹ್ಮಾವರದ ಅಪಾರ್ಟ್ಮೆಂಟ್ನಲ್ಲಿ ಮಹಿಳೆಯ ಬರ್ಬರ ಕೊಲೆ..!