ಚಿತ್ರದುರ್ಗ: ಸಿದ್ದಾಪುರ ಬಳಿ ಟಾಟಾ ಏಸ್ ಹಾಗು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲೇ ಮೂವರು ಸಾವನ್ನಪ್ಪಿದ್ದಾರೆ.
ಚಳ್ಳಕೆರೆ ತಾಲೂಕಿನ ಸಿದ್ದಾಪುರ ಗ್ರಾಮದ ಬಳಿ ಈ ಅವಘಡ ನಡೆದಿದ್ದು, ಗಾಯಾಳುಗಳನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಾಟಾ ಏಸ್ನಲ್ಲಿದ್ದ ಹೊಟ್ಟೆಪ್ಪನಹಳ್ಳಿಯ ಸಿದ್ದಪ್ಪ (35), ಬೊಮ್ಮಸಂದ್ರದ ಕರಿಯಣ್ಣ (30), ಬೈಕ್ ಸವಾರ ದುಗ್ಗಾವರದ ನೀಲಪ್ಪ (36) ಮೃತಪಟ್ಟಿದ್ದಾರೆ. ಟಾಟಾ ಏಸ್ನಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಚಳ್ಳಕೆರೆ ಪೊಲೀಸ್ ಠಾಣೆಯ ಸಿಬ್ಬಂದಿ ಪರಿಶೀಲನೆ ನಡೆಸಿದರು. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.