ಚಿತ್ರದುರ್ಗ: ರಾಜ್ಯ ಬಿಜೆಪಿ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಟಿಪ್ಪು ಸುಲ್ತಾನ್ ಜಯಂತಿ ರದ್ದು ಮಾಡಿತ್ತು. ಆದರೂ ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಆಚರಿಸಲಾಗಿದೆ.
ಯಡಿಯೂರಪ್ಪ ನೇತೃತ್ವದ ಸರ್ಕಾರವು, ಸರ್ಕಾರದಿಂದ ಆಚರಿಸಲ್ಪಡುತ್ತಿದ್ದ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿದೆ. ಆದರೆ, ಚಿತ್ರದುರ್ಗದಲ್ಲಿ ಮಾತ್ರ ಟಿಪ್ಪು ಸುಲ್ತಾನ್ ಜಯಂತಿ ಕೈಬಿಡದೇ ಅವರ ಅಭಿಮಾನಿಗಳು ಆಚರಿಸಿದ್ರು. ಕೊರೊನಾ ಕಾರಣದಿಂದಾಗಿ ಸರಳವಾಗಿ ಆಚರಣೆ ಮಾಡಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಜಯಂತಿಯನ್ನು ಮೈಸೂರಿನ ಹುಲಿ ಹಜರತ್ ಟಿಪ್ಪು ಸುಲ್ತಾನ್ ಅವರ ಫೋಟೋ ಇರಿಸಿ ಅದಕ್ಕೆ ಪುಷ್ಪಾರ್ಚನೆ ಮಾಡುವ ಮುಖೇನ ದೇಶಕ್ಕಾಗಿ ಮಡಿದ ಟಿಪ್ಪುವನ್ನು, ಕೆಲ ಹೋರಾಟಗಾರರು ನೆನೆದರು. ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯ ಸಂಸ್ಥಾಪಕ ರಾಜ್ಯಧ್ಯಕ್ಷ ಟಿಪ್ಪು ಖಾಸಿಂ ಅಲಿಯವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಜಯಂತಿಯಲ್ಲಿ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತಾಜ್ ಪೀರ್ ಭಾಗಿಯಾಗಿ ಟಿಪ್ಪು ಸುಲ್ತಾನ್ ಜಯಂತಿಯನ್ನು ಸರ್ಕಾರ ರದ್ದು ಮಾಡಿದ್ದಕ್ಕಾಗಿ ಕಿಡಿಕಾರಿದ್ರು.