ಚಿತ್ರದುರ್ಗ: ನಿನ್ನೆಯಿಂದ ನಾಪತ್ತೆಯಾಗಿದ್ದ ಮಂಗಳಮುಖಿ ಅಂಜಲಿ ಎಂಬುವವರ ಶವ ಹಿರಿಯೂರು ತಾಲೂಕಿನ ಪಾಲವ್ವನಹಳ್ಳಿ ಬಳಿ ಪತ್ತೆಯಾಗಿದೆ.
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಅಂಜಲಿ(35) ಕಗ್ಗೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿದು ಡಿವೈಎಸ್ಪಿ ಪಾಂಡುರಂಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.
ಐಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.