ETV Bharat / state

ನಿಂತಿದ್ದ ಲಾರಿಗೆ ಗುದ್ದಿದ ಮತ್ತೊಂದು ಲಾರಿ: ಚಿತ್ರದುರ್ಗದಲ್ಲಿ ಇಬ್ಬರು ದುರ್ಮರಣ - Two died after a lorry hits another parked lorry

ಚಿತ್ರದುರ್ಗ ನಗರ ಹೊರವಲಯದ ತಮಟಕಲ್ಲು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಿಂತಿದ್ದ ಲಾರಿಗೆ ಗುದ್ದಿದ ಮತ್ತೊಂದು ಲಾರಿ
ನಿಂತಿದ್ದ ಲಾರಿಗೆ ಗುದ್ದಿದ ಮತ್ತೊಂದು ಲಾರಿ
author img

By

Published : Sep 23, 2021, 3:25 PM IST

ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ನಗರ ಹೊರವಲಯದ ತಮಟಕಲ್ಲು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಗುದ್ದಿದ ರಭಸಕ್ಕೆ ಲಾರಿ ಚಾಲಕ ಹಾಗೂ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವಿಯ ಚಾಲಕ ಸದ್ದಾಂ ಹುಸೇನ್ (30) ಮತ್ತು ಕ್ಲೀನರ್ ಬೀರಪ್ಪ (23) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಅನುಮಾನಾಸ್ಪದ ಸ್ಫೋಟದಲ್ಲಿ ಇಬ್ಬರು ದುರ್ಮರಣ

ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಲಾರಿಯಿಂದ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಘಟನೆ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.