ಚಿತ್ರದುರ್ಗ: ಟ್ಯಾಂಕರ್ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದ ಸಮೀಪ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಇಂದು ಸಂಭವಿಸಿದೆ. ಮೃತಪಟ್ಟ ಮಹಿಳೆಯರನ್ನು ಬೆಂಗಳೂರಿನ ನಿರ್ಮಲಾ(55), ವಿನುತಾ(40) ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಫಣಿರಾಜ್(36), ರಶ್ಮಿ(32) ಮತ್ತು ಯಶಸ್(2) ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿಂದ ಹೊಸಪೇಟೆಗೆ ತೆರಳುತ್ತಿದ್ದಾಗ ಅಪಘಾತ ನಡೆದಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಚಾರ್ಮಾಡಿ ಘಾಟ್ನಲ್ಲಿ ಅಪಘಾತ: ಸಾವಿರ ಅಡಿ ಪ್ರಪಾತಕ್ಕೆ ಬಿದ್ದ ಲಾರಿ, ಪವಾಡ ಸದೃಶ ರೀತಿಯಲ್ಲಿ ಚಾಲಕ ಪಾರು