ಚಿತ್ರದುರ್ಗ: ಜಿಲ್ಲೆಯಲ್ಲಿ ಚಿರತೆ ಸಂತತಿ ಹೆಚ್ಚಾಗಿದ್ದು, ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಲಗ್ಗೆ ಇಡುವುದು ಸಾಮಾನ್ಯವಾಗಿದೆ. ಆದರೆ ಹೀಗೆ ಆಹಾರಕ್ಕಾಗಿ ನಾಡಿಗೆ ಬಂದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದೆ.
ಚಿತ್ರದುರ್ಗ ತಾಲೂಕಿನ ಗುಡ್ಡದರಂಗವ್ವನಹಳ್ಳಿ ಗ್ರಾಮದ ಬಳಿ ತಡರಾತ್ರಿ ಘಟನೆ ನಡೆದಿದೆ. ಸುಮಾರು 8 ತಿಂಗಳ ಹೆಣ್ಣು ಚಿರತೆ ಇದಾಗಿದೆ ಎಂದು ಅಂದಾಜಿಸಲಾಗಿದೆ.
ಸದ್ಯ ಮಾಹಿತಿ ತಿಳಿದ ಅರಣ್ಯ ಇಲಾಖೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.