ಚಿತ್ರದುರ್ಗ : ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣದ ಕಾಮಗಾರಿ ಸ್ಥಳಕ್ಕೆ ಸಂಸದ ಎ ನಾರಾಯಣಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿನ್ನೆ ಕಾಮಗಾರಿ ನಡೆಯುವ ವೇಳೆ 100 ಅಡಿ ಎತ್ತರದ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದರು. ಈ ದುರ್ಘಟನೆಯಿಂದ ಕೆಲಸ ಮಾಡಲು ಭಯಭೀತರಾಗಿ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿದ್ದರು. ಹೀಗಾಗಿ ಕಾಮಗಾರಿ ಸ್ಥಳಕ್ಕೆ ಇಂದು ಭೇಟಿ ನೀಡಿದ ಸಂಸದ ಎ ನಾರಾಯಣಸ್ವಾಮಿ, ಕಾರ್ಮಿಕರು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಣ್ಣು ಕುಸಿತ ಘಟನೆಯಿಂದ ಭಯಭೀತರಾಗಿದ್ದ ಕಾರ್ಮಿಕರಿಗೆ ಧೈರ್ಯ ತುಂಬಿದರು.
ಹೆಬ್ಬೂರು ಗ್ರಾಮದ ಬಳಿ ರೈಲ್ವೆ ಹಳಿ ಕೆಳಭಾಗ ಹಾದುಹೋಗುವ ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ರೈಲ್ವೆ ಇಲಾಖೆಯು ರೈಲು ಹಳಿ ಕೆಳಗೆ ಬಾಕ್ಸ್ ಅಳವಡಿಕೆ ಕಾಮಗಾರಿ ನಡೆಸುತ್ತಿದೆ.