ಚಿತ್ರದುರ್ಗ: ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುತ್ತೇವೆ ಎಂದು ಸರ್ಕಾರದ ನಿರ್ಧಾರನ್ವಯವಾಗಿ ಡಿಎಂಎಫ್ ಅನುದಾನ ಬಳಸಿ ಮೆಡಿಕಲ್ ಕಾಲೇಜನ್ನು ನಿರ್ಮಾಣ ಮಾಡಲಾಗುವುದು ಎಂದು ಸಂಸದ ಎ.ನಾರಾಯಣಸ್ವಾಮಿ ಭರವಸೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಜೆಟ್ ಅಧಿವೇಶನದಲ್ಲಿ ಆರೋಗ್ಯ ಸಚಿವರು ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯ ಶಾಸಕ - ಸಂಸದರ ಒಮ್ಮತದಿಂದ ಡಿಎಂಎಫ್ ಅನುದಾನ ಬಳಸಿಕೊಂಡು ಶೀಘ್ರವೇ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಆರಂಭವಾಗಲಿದೆ ಎಂದರು.
ವೈದ್ಯಕೀಯ ಕಾಲೇಜು ನಿರ್ಮಾಣವಾಗಬೇಕು ಎಂಬ ತೀರ್ಮಾನಕ್ಕೆ ಎಲ್ಲಾ ಶಾಸಕರು ಒಪ್ಪಿಗೆ ಸೂಚಿಸಿದ್ದಾರೆ. ಸರ್ಕಾರ ಮಾಡಿರುವ ತೀರ್ಮಾನಕ್ಕೆ ನಾವು ಬಂದಿದ್ದೇವೆ. ರಾಜ್ಯದ ಪ್ರತಿಯೊಂದು ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಇರಬೇಕೆಂದು ಸರ್ಕಾರದ ನಿಲುವಿದೆ. ಇದಕ್ಕಾಗಿ ನಾನು ಕೂಡ ಕೇಂದ್ರ ಮಂತ್ರಿಗಳ ಜೊತೆಗೆ ಮಾತನಾಡಿದ್ದೇನೆ ಎಂದರು.
ಎಲ್ಲರೂ ಸೇರಿ ಡಿಎಂಎಫ್ ಅನುದಾನದಲ್ಲಿ ಜಿಲ್ಲೆಗೆ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುತ್ತೇವೆ ಎಂದು ಸಂಸದರು ಹೇಳಿದ್ದಾರೆ.