ಚಿತ್ರದುರ್ಗ: ರಾಜ್ಯದಲ್ಲಿ ಮೊದಲನೇ ಹಂತದ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ನಾವು ಕರ್ನಾಟಕದಲ್ಲಿ 22 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ಮಾತನಾಡಿದ ಅವರು ಕೇಂದ್ರಲ್ಲಿ 300 ಸ್ಥಾನಗಳನ್ನ ಬಿಜೆಪಿ ವಶಪಡಿಸಿಕೊಳ್ಳುವ ಮೂಲಕ ಮತ್ತೆ ಅಧಿಕಾರ ಹಿಡಿಯುತ್ತೆ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯನೋ ಮೋದಿ ಪ್ರಧಾನಿ ಆಗುವುದೇ ಅಷ್ಟೇ ಸತ್ಯ ಎಂದು ಭವಿಷ್ಯ ನುಡಿದಿದ್ದಾರೆ.
ಇನ್ನೂ ಮಾಜಿ ಕೇಂದ್ರ ಸಚಿವ ಅನಂತ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದರ ಬಗ್ಗೆ ಮಾತನಾಡಿದ ಅವರು, ನಾವು ಕೂಡ ತೇಜಸ್ವೀನಿ ಅನಂತ ಕುಮಾರ್ ಅವರ ಹೆಸರನ್ನು ಹೈಕಮಾಂಡ್ಗೆ ಕಳುಹಿಸಿದ್ದೀವಿ.ಆದರೆ ಕೊನೆಯ ಗಳಿಗೆಯಲ್ಲಿ ತೇಜಸ್ವಿ ಸೂರ್ಯಗೆ ಟಿಕೆಟ್ ಫೈನಲ್ ಮಾಡಲಾಗಿದೆ. ಇದರಿಂದ ಅಲ್ಲಿ ಏನೂ ನಡೆದಿದೆ ಎಂದು ನನಗೂ ತಿಳಿದಿಲ್ಲ ಎಂದಿದ್ದಾರೆ.
ಇತ್ತ ಬಿಜೆಪಿ ವಿರುದ್ಧ ಭೋವಿ ಸಮುದಾಯ ಮುನಿಸಿಕೊಂಡಿರುವ ವಿಚಾರವಾಗಿ ಮಾತನಾಡಿದ ಅವ್ರು, ಭೋವಿ ಗುರು ಪೀಠಕ್ಕೆ ಭೇಟಿ ನೀಡಿ ಅವಕಾಶ ಕಲ್ಪಿಸುವಂತೆ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಬಳಿ ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.